alex Certify
ಕನ್ನಡ ದುನಿಯಾ       Mobile App
       

Kannada Duniya

ಬನ್ಸಾಲಿ ಮೇಲೆ ಹಲ್ಲೆ, ‘ಪದ್ಮಾವತಿ’ ಸೆಟ್ ಧ್ವಂಸ

jaip

ಜೈಪುರ: ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರ ಮೇಲೆ ಹಲ್ಲೆ ನಡೆಸಲಾಗಿದ್ದು, ಬಟ್ಟೆಯನ್ನು ಹರಿದು ಹಾಕಲಾಗಿದೆ.

ದೀಪಿಕಾ ಪಡುಕೋಣೆ ಮತ್ತು ಶಾಹಿದ್ ಕಪೂರ್ ಅಭಿನಯದ ‘ಪದ್ಮಾವತಿ’ ಚಿತ್ರದ ಚಿತ್ರೀಕರಣ ಜೈಪುರದಲ್ಲಿ ನಡೆಯುತ್ತಿತ್ತು.

ಚಿತ್ರೀಕರಣದ ಸ್ಥಳದಲ್ಲಿ ಅದ್ಧೂರಿ ಸೆಟ್ ಹಾಕಲಾಗಿದ್ದು, ಅಲ್ಲಿ ಸಂಜಯ್ ಲೀಲಾ ಬನ್ಸಾಲಿ ಇದ್ದ ಸಂದರ್ಭದಲ್ಲಿ ಕರ್ಣಿ ಸೇನಾ ಕಾರ್ಯಕರ್ತರು ಏಕಾಏಕಿ ದಾಂಧಲೆ ನಡೆಸಿದ್ದಾರೆ.

‘ಪದ್ಮಾವತಿ’ ಚಿತ್ರದಲ್ಲಿ ಇತಿಹಾಸ ತಿರುಚಲಾಗಿದೆ ಎಂದು ಆರೋಪಿಸಿ, ಕರ್ಣಿ ಸೇನಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಸೆಟ್ ಧ್ವಂಸಗೊಳಿಸಿ, ಸಂಜಯ್ ಲೀಲಾ ಬನ್ಸಾಲಿ ಮೇಲೆ ಹಲ್ಲೆ ಮಾಡಿ ಅವರ ಬಟ್ಟೆ ಹರಿದು ಹಾಕಿದ್ದಾರೆ. ಕಾರ್ಯಕರ್ತರನ್ನು ತಡೆಯಲು ಭದ್ರತಾ ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...