alex Certify
ಕನ್ನಡ ದುನಿಯಾ       Mobile App
       

Kannada Duniya

ಮಧ್ಯರಾತ್ರಿಯೇ ‘ರಾಜಕುಮಾರ’ ನ ಮೊದಲ ಶೋ

power

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ‘ರಾಜಕುಮಾರ’ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ.

ಬಳ್ಳಾರಿಯ ಶಿವಗಂಗಾ ಚಿತ್ರಮಂದಿರದಲ್ಲಿ ಮೊದಲ ಪ್ರದರ್ಶನ ಮಧ್ಯರಾತ್ರಿ 12.30 ಕ್ಕೆ ಆರಂಭವಾಗಿದೆ. ನಿನ್ನೆ ಸಂಜೆಯಿಂದಲೇ ಅಭಿಮಾನಿಗಳು ಥಿಯೇಟರ್ ಬಳಿ ಜಮಾಯಿಸಿದ್ದಾರೆ. ಕುಣಿದು ಕುಪ್ಪಳಿಸಿ ಸಂಭ್ರಮಿಸಿದ್ದಾರೆ.

ನೆಚ್ಚಿನ ನಟನ ಕಟೌಟ್ ಗೆ ಹಾರ ಹಾಕಿದ್ದಾರೆ. ಅಭಿಮಾನಿಗಳ ಸಂಭ್ರಮದ ನಡುವೆಯೇ ‘ರಾಜಕುಮಾರ’ ಮೊದಲ ಪ್ರದರ್ಶನ ಕಂಡಿದೆ.

ಹೊಸಪೇಟೆಯಲ್ಲಿ ಕೆಲವು ಪುನೀತ್ ಅಭಿಮಾನಿಗಳು ದಾಂಧಲೆ ನಡೆಸಿದ್ದಾರೆ. ಹಂಪಿ ರಸ್ತೆಯ ಬಾಲಾ ಚಿತ್ರಮಂದಿರದಲ್ಲಿ ಮಧ್ಯರಾತ್ರಿ ಪ್ರದರ್ಶನ ಆರಂಭಿಸಬೇಕೆಂದು ಒತ್ತಾಯಿಸಿದ್ದಾರೆ. ಈ ವೇಳೆ ಕೆಲವರು ಗೇಟ್ ಮುರಿದು ಒಳ ನುಗ್ಗಿದ್ದು, ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸರ ಮೇಲೂ ಕಲ್ಲು ತೂರಿದ್ದರಿಂದ ಪೇದೆಯೊಬ್ಬರು ಗಾಯಗೊಂಡಿದ್ದಾರೆ. 6 ಯುವಕರನ್ನು ಹೊಸಪೇಟೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ಬೆಂಗಳೂರು ಗೌಡನಪಾಳ್ಯದ ಶ್ರೀನಿವಾಸ ಚಿತ್ರಮಂದಿರ, ತಾವರಕೆರೆಯ ಬಾಲಾಜಿ ಟಾಕೀಸ್ ನಲ್ಲಿ ಬೆಳಗಿನ ಜಾವ ಮೊದಲ ಪ್ರದರ್ಶನಕ್ಕೆ ಪುನೀತ್ ಅಭಿಮಾನಿಗಳ ನೂಕು ನುಗ್ಗಲು ಉಂಟಾಗಿದೆ.

ರಾಜ್ಯದ ಅನೇಕ ಕಡೆಗಳಲ್ಲಿ ಬೆಳಗಿನ ಜಾವದಿಂದಲೇ ‘ರಾಜಕುಮಾರ’ ಪ್ರದರ್ಶನ ಆರಂಭವಾಗಿದೆ. ಅಭಿಮಾನಿಗಳ ಸಂಭ್ರಮ ಹೆಚ್ಚಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...