alex Certify
ಕನ್ನಡ ದುನಿಯಾ       Mobile App
       

Kannada Duniya

‘ಅಂಜನಿಪುತ್ರ’ನ ನೋಡಲು ರಾತ್ರಿಯೇ ಮುಗಿಬಿದ್ದ ಫ್ಯಾನ್ಸ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ‘ಅಂಜನಿಪುತ್ರ’ ಇಂದಿನಿಂದ ಬಿಡುಗಡೆಯಾಗಿದೆ. ರಾತ್ರಿಯೇ ಚಿತ್ರಮಂದಿರಗಳ ಬಳಿ ನೆರೆದಿದ್ದ ಅಭಿಮಾನಿಗಳು ನೆಚ್ಚಿನ ನಟನ ಸಿನಿಮಾ ನೋಡಲು ಕಾತರಿಸಿದ್ದಾರೆ.

ಬೆಂಗಳೂರು, ಬಳ್ಳಾರಿ, ಹೊಸಪೇಟೆ ಸೇರಿದಂತೆ ಅನೇಕ ಕಡೆಗಳಲ್ಲಿ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಚಿತ್ರ ಪ್ರದರ್ಶನ ಕಾಣುತ್ತಿರುವ ಚಿತ್ರಮಂದಿರಗಳನ್ನು ಅಲಂಕರಿಸಿರುವ ಅಭಿಮಾನಿಗಳು, ‘ಅಂಜನಿಪುತ್ರ’ ಶತದಿನೋತ್ಸವ ಆಚರಿಸಲೆಂದು ಶುಭ ಕೋರಿ ಫ್ಲೆಕ್ಸ್ ಗಳನ್ನು ಹಾಕಿದ್ದಾರೆ.

ಕೆಲವು ಕಡೆಗಳಲ್ಲಿ ಬೆಳಗಿನ ಜಾವವೇ ಮೊದಲ ಪ್ರದರ್ಶನ ಆರಂಭವಾಗಿದೆ. ರಾಜ್ಯದ 400 ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಮಾತ್ರವಲ್ಲದೇ, ಹೊರ ರಾಜ್ಯ, ವಿದೇಶಗಳಲ್ಲಿಯೂ ‘ಅಂಜನಿಪುತ್ರ’ ತೆರೆ ಕಾಣ್ತಿದೆ.

ಎಂ.ಎನ್. ಕುಮಾರ್ ನಿರ್ಮಾಣ ಮಾಡಿರುವ ಚಿತ್ರವನ್ನು ಎ. ಹರ್ಷ ನಿರ್ದೇಶಿಸಿದ್ದಾರೆ. ಪುನೀತ್ ರಾಜ್ ಕುಮಾರ್, ರಶ್ಮಿಕಾ ಮಂದಣ್ಣ, ಹರಿಪ್ರಿಯಾ, ರಮ್ಯಕೃಷ್ಣ ಸೇರಿದಂತೆ ಬಹುದೊಡ್ಡ ತಾರಾಗಣವೇ ಚಿತ್ರದಲ್ಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...