alex Certify
ಕನ್ನಡ ದುನಿಯಾ       Mobile App
       

Kannada Duniya

ಅಪ್ಪು ಬರ್ತಡೇಯಲ್ಲಿ ಮುಗಿಲು ಮುಟ್ಟಿದ ಅಭಿಮಾನಿಗಳ ಸಂಭ್ರಮ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತಮ್ಮ ಅಪಾರ ಅಭಿಮಾನಿಗಳ ಸಮ್ಮುಖದಲ್ಲಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ರಾತ್ರಿಯಿಂದಲೇ ಪುನೀತ್ ನಿವಾಸದ ಬಳಿ ನೆರೆದಿದ್ದ ಅಭಿಮಾನಿಗಳು ನೆಚ್ಚಿನ ನಟನನ್ನು ಕಂಡು ಶುಭಾಶಯ ಕೋರಿದ್ದಾರೆ. ಪುನೀತ್ ಅವರ ಫ್ಲೆಕ್ಸ್ ಗಳನ್ನು ಹಾಕಿದ ಅಭಿಮಾನಿಗಳು, ತಾವು ತಂದಿದ್ದ ಕೇಕ್ ಅನ್ನು ನೆಚ್ಚಿನ ನಟನಿಂದ ಕಟ್ ಮಾಡಿಸಿದ್ದಾರೆ. ಪಟಾಕಿ ಸಿಡಿಸಿ, ಸಿಹಿ ಹಂಚಿ, ಘೋಷಣೆ ಕೂಗಿ ಸಂಭ್ರಮಿಸಿದ್ದಾರೆ. ಫೋಟೋ, ಸೆಲ್ಫಿ ತೆಗೆದುಕೊಂಡು ಖುಷಿಪಟ್ಟಿದ್ದಾರೆ.

ಅಭಿಮಾನಿಗಳೊಂದಿಗೆ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಪುನೀತ್, ಅವರಿಂದಾಗಿಯೇ ನಾವು ಎಂದು ಹೇಳಿದ್ದಾರೆ. ‘ನಟಸಾರ್ವಭೌಮ’ ಆರಂಭವಾಗಿದೆ. ಸಂತೋಷ್ ಆನಂದರಾಮ್ ನಿರ್ದೇಶನದಲ್ಲಿ ಮತ್ತೊಂದು ಚಿತ್ರ ಸೆಟ್ಟೇರಲಿದೆ ಎಂದು ಹೇಳಿದ್ದಾರೆ.

ಇನ್ನು ಪುನೀತ್ ಹುಟ್ಟುಹಬ್ಬದ ಪ್ರಯುಕ್ತ ‘ನಟಸಾರ್ವಭೌಮ’ ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆ ಮಾಡಲಾಗಿದ್ದು, ಅಭಿಮಾನಿಗಳ ಸಂಭ್ರಮವನ್ನು ಹೆಚ್ಚಿಸಿದೆ.

 

"ನಟಸಾರ್ವಭೌಮ" first look teaser ನಿಮಗಾಗಿ ಇವತ್ತು ..ನೋಡಿ ಹರಸಿ..

Natasarvabhowma – ನಟಸಾರ್ವಭೌಮ first look teaser ನಿಮಗಾಗಿ ಇವತ್ತು ..ನೋಡಿ ಹರಸಿ..

Posted by Puneeth Rajkumar on Friday, March 16, 2018

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...