alex Certify
ಕನ್ನಡ ದುನಿಯಾ       Mobile App
       

Kannada Duniya

ಮತ್ತೆ ಕಿರುತೆರೆಯಲ್ಲಿ ಪವರ್ ಸ್ಟಾರ್ ಮಿಂಚು

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಪುನೀತ್ ಮತ್ತೆ ಕಿರುತೆರೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

‘ಕನ್ನಡದ ಕೋಟ್ಯಾಧಿಪತಿ’ ಶೋ ಮೂಲಕ ಅಪ್ಪು ಮೋಡಿ ಮಾಡಿದ್ದರು. ಈಗ ಮತ್ತೊಂದು ರಿಯಾಲಿಟಿ ಶೋನಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ.

ಬಾಲಿವುಡ್ ಸ್ಟಾರ್ ಅಮಿತಾಬ್ ಬಚ್ಚನ್ ನಡೆಸಿಕೊಡುವ ‘ಕೌನ್ ಬನೇಗಾ ಕರೋಡ್ ಪತಿ’ ಮಾದರಿಯಲ್ಲಿ ‘ಕನ್ನಡದ ಕೋಟ್ಯಾಧಿಪತಿ’ ಮೂಡಿ ಬಂದಿತ್ತು. ಪುನೀತ್ ರಾಜ್ ಕುಮಾರ್ ತಮ್ಮದೇ ಶೈಲಿಯಲ್ಲಿ ಪ್ರಶ್ನೆಗಳನ್ನು ಕೇಳುವ ಮೂಲಕ ನಿರೂಪಣೆ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗಿದ್ದರು.

ಈಗ ಗೇಮ್ ಶೋ ಮೂಲಕ ಮತ್ತೆ ಕಿರುತೆರೆಯಲ್ಲಿ ಮಿಂಚು ಹರಿಸಲಿದ್ದಾರೆ. ಹೊಸ ರೀತಿಯ ರಿಯಾಲಿಟಿ ಶೋ ಇದಾಗಿದ್ದು, ಪುನೀತ್ ನಿರೂಪಕರಾಗಿ ಕಾಣಿಸಿಕೊಳ್ಳಲಿದ್ದಾರೆ. ಸದ್ಯ ಅವರು ಹರ್ಷ ನಿರ್ದೇಶನದ ‘ಅಂಜನಿಪುತ್ರ’ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ನಂತರದಲ್ಲಿ ಟಿ.ವಿ. ಶೋ ಕುರಿತಾಗಿ ಹೆಚ್ಚಿನ ಮಾಹಿತಿ ಸಿಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...