alex Certify
ಕನ್ನಡ ದುನಿಯಾ       Mobile App
       

Kannada Duniya

ಕಾರು ಅಪಘಾತದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪಾರು

ಸ್ಯಾಂಡಲ್ ವುಡ್ ನ ಖ್ಯಾತ ನಟ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪ್ರಯಾಣಿಸುತ್ತಿದ್ದ ಕಾರು ಆಂಧ್ರಪ್ರದೇಶದ ಅನಂತಪುರದ ಬಳಿ ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಪುನೀತ್ ರಾಜ್ ಕುಮಾರ್ ಅಪಾಯದಿಂದ ಪಾರಾಗಿದ್ದಾರೆ.

ಕಳೆದ ರಾತ್ರಿ ಶೂಟಿಂಗ್ ಮುಗಿಸಿಕೊಂಡು ರೇಂಜ್ ರೋವರ್ ಕಾರಿನಲ್ಲಿ ವಾಪಸ್ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ರಸ್ತೆಯಲ್ಲಿದ್ದ ಗುಂಡಿ ಕಾಣದ ಕಾರಣ ಈ ಅಪಘಾತ ನಡೆದಿದೆ ಎನ್ನಲಾಗಿದೆ.

ಪುನೀತ್ ಸೇರಿದಂತೆ ಕಾರಿನಲ್ಲಿದ್ದವರೆಲ್ಲರೂ ಅಪಾಯದಿಂದ ಪಾರಾಗಿದ್ದು, ಇದೇ ಸಂದರ್ಭದಲ್ಲಿ ಅದೇ ಮಾರ್ಗವಾಗಿ ಬರುತ್ತಿದ್ದ ಬೆಂಗಳೂರಿನ ಉದ್ಯಮಿಯೊಬ್ಬರು ಪುನೀತ್ ಅವರನ್ನು ಗುರುತಿಸಿ ತಮ್ಮ ಕಾರಿನಲ್ಲಿ ಡ್ರಾಪ್ ಮಾಡಿದ್ದಾರೆ.

ತಡರಾತ್ರಿ ಬೆಂಗಳೂರಿನ ತಮ್ಮ ಸದಾಶಿವನಗರದ ಮನೆಗೆ ಬಂದ ಪುನೀತ್ ರಾಜ್ ಕುಮಾರ್ ಅಲ್ಲಿ ನೆರೆದಿದ್ದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ತಮಗೆ ಯಾವುದೇ ತೊಂದರೆಯಾಗಿಲ್ಲ. ಆರಾಮವಾಗಿದ್ದೇನೆ, ಆತಂಕಪಡುವ ಅಗತ್ಯವಿಲ್ಲ ಎಂದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...