alex Certify
ಕನ್ನಡ ದುನಿಯಾ       Mobile App
       

Kannada Duniya

ಬನಶಂಕರಿ ದೇವಿಯ ದರ್ಶನ ಪಡೆದ ಪವರ್ ಸ್ಟಾರ್ ಪುನೀತ್

‘ನಟ ಸಾರ್ವಭೌಮ’ ಚಿತ್ರದ ಚಿತ್ರೀಕರಣಕ್ಕಾಗಿ ಬಾಗಲಕೋಟೆ ಜಿಲ್ಲೆ ಬಾದಾಮಿಯಲ್ಲಿ ತಂಗಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಇಂದು ಬನಶಂಕರಿ ದೇವಿಯ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದ್ದಾರೆ.

ಮಹಾಕೂಟದಲ್ಲಿ ‘ನಟ ಸಾರ್ವಭೌಮ’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ಪುನೀತ್ ರಾಜಕುಮಾರ್ ಅವರ ಅಭಿನಯದ ಚಿತ್ರೀಕರಣ ಪೂರ್ಣಗೊಂಡಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಮರಳುತ್ತಿರುವ ಪುನೀತ್ ರಾಜಕುಮಾರ್, ಇದಕ್ಕೂ ಮುನ್ನ ಬನಶಂಕರಿ ದೇವಾಲಯಕ್ಕೆ ಭೇಟಿ ನೀಡಿದ್ದರು.

ಈ ವೇಳೆ ಅವರನ್ನು ಕಾಣಲು ಮುಗಿಬಿದ್ದ ಅಭಿಮಾನಿಗಳು, ತಮ್ಮ ನೆಚ್ಚಿನ ನಟನ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ.

ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ‘ನಟ ಸಾರ್ವಭೌಮ’ ಚಿತ್ರವನ್ನು ಪವನ್ ಒಡೆಯರ್ ನಿರ್ದೇಶಿಸುತ್ತಿದ್ದು, ಈ ಚಿತ್ರ ಅಕ್ಟೋಬರ್ 5 ರಂದು ತೆರೆಗೆ ಬರುವ ನಿರೀಕ್ಷೆಯಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...