alex Certify
ಕನ್ನಡ ದುನಿಯಾ       Mobile App
       

Kannada Duniya

ರಜನಿಕಾಂತ್ ಅಭಿಮಾನಿಗಳು ಅರೆಸ್ಟ್

????????????????????????????????????????????????????????????????????????????????????

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಬರುವ ಕುರಿತಾಗಿ ಪರ, ವಿರೋಧ ಚರ್ಚೆಗಳು ನಡೆದಿವೆ. ನಿನ್ನಯಷ್ಟೇ ತಮಿಳು ಸಂಘಟನೆಗಳಿಂದ ರಜನಿ ರಾಜಕೀಯ ಪ್ರವೇಶ ವಿರೋಧಿಸಿ ಪ್ರತಿಭಟನೆ ನಡೆಸಲಾಗಿತ್ತು. ತಮಿಳರ್ ಮುನ್ನೇತ್ರ ಪಡೈ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರಿಂದ ರಜನಿ ನಿವಾಸಕ್ಕೆ ಬಿಗಿಭದ್ರತೆ ಒದಗಿಸಲಾಗಿದೆ.

ಇಂದು ಚೆನ್ನೈನ ಆರ್.ಕೆ. ನಗರದಲ್ಲಿ ರಜನಿಕಾಂತ್ ರಾಜಕೀಯ ಪ್ರವೇಶಿಸಬೇಕೆಂದು ಒತ್ತಾಯಿಸಿ ಅವರ ಬೆಂಬಲಿಗರು ಜಾಥಾ ನಡೆಸಿದ್ದಾರೆ.

ನೂರಾರು ಸಂಖ್ಯೆಯಲ್ಲಿದ್ದ ಬೆಂಬಲಿಗರು ಪ್ರತಿಭಟನೆ ನಡೆಸಿದ್ದು, ರಜನಿಕಾಂತ್ ರಾಜಕೀಯಕ್ಕೆ ಬರಬೇಕೆಂದು ಮನವಿ ಮಾಡಿದ್ದಾರೆ.

ಸ್ಥಳಕ್ಕೆ ಧಾವಿಸಿದ ಪೊಲೀಸರು 25 ಕ್ಕೂ ಅಧಿಕ ಮಂದಿ ರಜನಿಕಾಂತ್ ಅಭಿಮಾನಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ರಜನಿಕಾಂತ್ ರಾಜಕೀಯ ಪ್ರವೇಶಿಸುವ ಸುಳಿವು ನೀಡಿದ್ದಾರೆ. ಅವರನ್ನು ಸೆಳೆಯಲು ಬಿ.ಜೆ.ಪಿ. ಪ್ರಯತ್ನ ನಡೆಸಿದೆ. ಆದರೆ, ರಜನಿ ಪ್ರಾದೇಶಿಕ ಪಕ್ಷ ಸ್ಥಾಪಿಸುವ ಚಿಂತನೆಯಲ್ಲಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...