alex Certify
ಕನ್ನಡ ದುನಿಯಾ       Mobile App
       

Kannada Duniya

ರಜನಿಕಾಂತ್ ರಾಜಕೀಯ, ಕುತೂಹಲಕ್ಕೆ ಇಂದು ತೆರೆ

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶ ಕುರಿತಾಗಿ ಮೂಡಿರುವ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ.

ಚೆನ್ನೈನ ರಾಘವೇಂದ್ರ ಕಲ್ಯಾಣ ಮಂದಿರದಲ್ಲಿ ಅಭಿಮಾನಿಗಳೊಂದಿಗೆ ಸಂವಾದ ನಡೆಸಿದ ರಜನಿಕಾಂತ್ ಡಿಸೆಂಬರ್ 31 ರಂದು ರಾಜಕೀಯ ನಿರ್ಧಾರ ಘೋಷಿಸುವುದಾಗಿ ಹೇಳಿದ್ದರು.

6 ದಿನಗಳಿಂದ ಅಭಿಮಾನಿಗಳೊಂದಿಗೆ ಸಮಾಲೋಚನೆ ನಡೆಸಿದ ರಜನಿಕಾಂತ್ ವಿವಿಧ ವಿಚಾರಗಳ ಕುರಿತಾಗಿ ಮಾತನಾಡಿದ್ದಾರೆ. ಹಿಂದಿನಿಂದಲೂ ನಾನು ರಾಜಕೀಯದಲ್ಲಿದ್ದೇನೆ. ರಾಜಕೀಯದ ಕಷ್ಟಗಳು ಏನೆಂಬುದು ನನಗೆ ಗೊತ್ತಿದೆ ಎಂದು ಹೇಳಿದ್ದರು.

ಡಿಸೆಂಬರ್ 31 ರಂದು ನಿರ್ಧಾರ ಪ್ರಕಟಿಸುವುದಾಗಿ ಅವರು ತಿಳಿಸಿದ್ದರು. ರಜನಿಕಾಂತ್ ರಾಜಕೀಯ ಪ್ರವೇಶದ ಕುರಿತಾಗಿ ಹೆಚ್ಚಿನ ಕುತೂಹಲ ಮೂಡಿದ್ದು, ದೇಶದ ಗಮನವೆಲ್ಲಾ ಚೆನ್ನೈನತ್ತ ನೆಟ್ಟಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...