alex Certify
ಕನ್ನಡ ದುನಿಯಾ       Mobile App
       

Kannada Duniya

ಅಭಿಮಾನಿಗಳ ಎದುರು ಡಾ.ರಾಜ್ ರಹಸ್ಯ ಬಿಚ್ಚಿಟ್ಟ ರಜನಿ….

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಪೂರ್ವಭಾವಿಯಾಗಿ ಅಭಿಮಾನಿಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ.

ಚೆನ್ನೈನ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಕಳೆದ 3 ದಿನಗಳಿಂದ ಅಭಿಮಾನಿಗಳೊಂದಿಗೆ ಸಭೆ ನಡೆಸಿರುವ ಅವರು, ತಮ್ಮ ಭಾಷಣದಲ್ಲಿ ವರನಟ ಡಾ. ರಾಜ್ ಕುಮಾರ್ ಅವರನ್ನು ನೆನಪಿಸಿಕೊಂಡಿದ್ದಾರೆ.

ತಂದೆ –ತಾಯಿ, ಗುರು, ಹಿರಿಯರನ್ನು ಗೌರವಿಸಬೇಕೆಂದು ಅಭಿಮಾನಿಗಳಿಗೆ ಹೇಳುತ್ತಿದ್ದ ರಜನಿಕಾಂತ್, ತಮ್ಮ ಮಾತಿನಲ್ಲಿ ರಾಜ್ ಕುಮಾರ್ ಅವರ ಸರಳತೆ ಬಗ್ಗೆ ಪ್ರಸ್ತಾಪಿಸಿದ್ದಾರೆ.

ನಾನು ಬೆಂಗಳೂರಿನಲ್ಲಿದ್ದ ಸಂದರ್ಭದಲ್ಲಿ ರಾಜ್ ಕುಮಾರ್ ಅವರನ್ನು ನೋಡಲು ಗಂಟೆಗಟ್ಟಲೇ ಕಾಯುತ್ತಿದ್ದೆ. ಕಾದು, ಕಾದು ಕೊನೆಗೆ ಅವರ ಪಾದ ಮುಟ್ಟಿ ನಮಸ್ಕರಿಸುವಾಗ ಪುಳಕಿತನಾಗಿದ್ದೆ. ಅವರು ಆದರ್ಶ ವ್ಯಕ್ತಿಯಾಗಿದ್ದರು. ಶಿವಾಜಿ ಗಣೇಶನ್, ಎಂ.ಜಿ.ಆರ್. ಅವರಂತೆಯೇ ರಾಜ್ ಕುಮಾರ್ ಮೇರು ನಟರಾಗಿದ್ದರು ಎಂದು ರಜನಿಕಾಂತ್ ಹೇಳಿದ್ದಾರೆ.

ರಾಜ್ ಕುಮಾರ್ ಅವರ ಪಕ್ಕಾ ಅಭಿಮಾನಿಯಾಗಿದ್ದ ನಾನು ಅವರ ಸಿನಿಮಾಗಳನ್ನು ಇಷ್ಟಪಟ್ಟು ನೋಡುತ್ತಿದ್ದೆ. ಅವರನ್ನು ಭೇಟಿ ಮಾಡುತ್ತಿದ್ದ ಕ್ಷಣಗಳು ಮರೆಯಲಾಗದಂತಹವು. ಅವರ ವ್ಯಕ್ತಿತ್ವ ನನ್ನ ಮೇಲೆ ಪ್ರಭಾವ ಬೀರಿದೆ. ರಾಜ್ ಕುಮಾರ್ ಅವರು ಸರಳತೆಗೆ ಮಾದರಿಯಾಗಿದ್ದರು ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...