alex Certify
ಕನ್ನಡ ದುನಿಯಾ       Mobile App
       

Kannada Duniya

ರಜನಿಕಾಂತ್‌ಗೆ ಲಕ್ನೋದಲ್ಲಿ ಮುತ್ತಿಗೆ ಹಾಕಿದ ಅಭಿಮಾನಿಗಳು

ಸೂಪರ್‌ಸ್ಟಾರ್ ರಜನಿಕಾಂತ್ ಅವರ ಮುಂಬರುವ ಚಿತ್ರ ‘ಪೆಟ್ಟಾ’ದ ಚಿತ್ರೀಕರಣ ಬಿರುಸಾಗಿ ಸಾಗಿದೆ. ನಿರ್ದೇಶಕ ಕಾರ್ತಿಕ್ ಸುಬ್ಬರಾಜ್ ಕಳೆದ ಕೆಲ ವಾರಗಳಿಂದ ಉತ್ತರಪ್ರದೇಶದ ಲಕ್ನೋದಲ್ಲಿ ತಮ್ಮ ಚಿತ್ರತಂಡದೊಂದಿಗೆ ಬೀಡುಬಿಟ್ಟಿದ್ದಾರೆ.

ಅಲ್ಲಿ ಚಿತ್ರೀಕರಣದ ವೇಳೆ ರಜನಿಯನ್ನು ಅಭಿಮಾನಿಗಳು ಮುತ್ತಿಕೊಂಡಿದ್ದಾರೆ. ಅಭಿಮಾನಿಗಳ ಪ್ರೀತಿಯ ಮುತ್ತಿಗೆಯಲ್ಲಿ ರಜನಿ ಸಿಲುಕಿಹಾಕಿಕೊಂಡ ಚಿತ್ರಗಳು ಹಾಗೂ ವಿಡಿಯೋಗಳು ಇಂಟರ್ನೆಟ್‌ನಲ್ಲಿ ಭಾರೀ ವೈರಲ್ ಆಗಿದೆ.

ಲಕ್ನೋದಲ್ಲಿನ ಶೂಟಿಂಗ್‌ ವೇಳೆ ರಜನಿ ಯಂಗ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ದೊಡ್ಡ ಬಜೆಟ್‌ನಲ್ಲಿ ನಿರ್ಮಾಣಗೊಳ್ಳುತ್ತಿರುವ ಈ ಚಿತ್ರಕ್ಕೆ ಸನ್ ಪಿಕ್ಚರ್ಸ್ ಬಂಡವಾಳ ಹೂಡಿದೆ. ನವಾಝುದ್ದೀನ್ ಸಿದ್ದಿಕಿ, ತ್ರಿಷಾ ಕೃಷ್ಣನ್, ಸಿಮ್ರಾನ್, ವಿಜಯ್ ಸೇತುಪತಿ ಪ್ರಮುಖ ಪಾತ್ರದಲ್ಲಿ ಕಾಣಿಸುತ್ತಿದ್ದಾರೆ.

ವಿಜಯ್ ಸೇತುಪತಿ ಈ ಚಿತ್ರದಲ್ಲಿ ಪ್ರಮುಖ ಖಳನ ಪಾತ್ರ ವಹಿಸಿದ್ದಾರೆ. ಅನಿರುದ್ಧ್ ರವಿಚಂದರ್ ಸಂಗೀತ ನಿರ್ದೇಶಕರಾಗಿದ್ದಾರೆ. ಮುಂದಿನ ಜನವರಿಯಲ್ಲಿ ಸಂಕ್ರಾಂತಿ ವೇಳೆಗೆ ಈ ಚಿತ್ರವನ್ನು ಬಿಡುಗಡೆಗೊಳಿಸಲು ಯೋಜಿಸಲಾಗಿದೆ ಎಂದು ವರದಿಯಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...