alex Certify
ಕನ್ನಡ ದುನಿಯಾ       Mobile App
       

Kannada Duniya

ಹಿಂದೂ ಮಕ್ಕಳ್ ಕಚ್ಚಿ ಮುಖಂಡರ ಜೊತೆ ರಜನಿ ಚರ್ಚೆ

rajini-for-story_64ರಾಜಕೀಯ ಪ್ರವೇಶಕ್ಕೆ ವೇದಿಕೆ ಸಿದ್ದಪಡಿಸಿಕೊಳ್ಳುತ್ತಿರುವ ತಮಿಳುನಾಡು ಸೂಪರ್ ಸ್ಟಾರ್ ರಜನಿಕಾಂತ್, ತಮ್ಮ ರಾಜಕೀಯ ಪ್ರವೇಶದ ಕುರಿತು ಈಗಾಗಲೇ ಅಭಿಮಾನಿಗಳ ಜೊತೆ ಸರಣಿ ಸಭೆ ನಡೆಸಿದ್ದಾರೆ.

ಭಾನುವಾರದಂದು ದಕ್ಷಿಣ ಭಾರತ ನದಿಗಳ ಜೋಡಣೆಗಾಗಿ ತಮಿಳುನಾಡಿನ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿರುವ ರಜನಿ ತಮ್ಮ ನಿವಾಸಕ್ಕೆ ಭೇಟಿ ನೀಡಿದ್ದ ರೈತ ಮುಖಂಡರ ಜೊತೆ ಸಮಾಲೋಚನೆ ನಡೆಸಿದ್ದಾರೆ. ಅಲ್ಲದೇ 1 ಕೋಟಿ ರೂ. ನೀಡುವುದಾಗಿ ಭರವಸೆ ನೀಡಿದ್ದಾರೆ.

ಈ ಮಧ್ಯೆ ರಜನಿಕಾಂತ್ ಅವರನ್ನು ಅವರ ಪೋಯಸ್ ಗಾರ್ಡನ್ ನಿವಾಸದಲ್ಲಿ ಹಿಂದೂ ಮಕ್ಕಳ್ ಕಚ್ಚಿ ಪಕ್ಷದ ಮುಖಂಡರು ಇಂದು ಭೇಟಿಯಾಗಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಹಾಗೂ ಮುಖಂಡ ಅರ್ಜುನ್ ಸಂಪತ್, ರಜನಿಯವರನ್ನು ಭೇಟಿಯಾದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದು, ತಮಿಳುನಾಡಿಗೆ ಹಾಗೂ ರಾಷ್ಟ್ರಕ್ಕೆ ಸೇವೆ ಸಲ್ಲಿಸಲು ಅವರು ಬಯಸಿದ್ದು, ರಜನಿಯವರ ರಾಜಕೀಯ ಪ್ರವೇಶವನ್ನು ನಾವು ಸ್ವಾಗತಿಸುತ್ತೇವೆ ಎಂದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...