alex Certify
ಕನ್ನಡ ದುನಿಯಾ       Mobile App
       

Kannada Duniya

ಅಣ್ಣಾವ್ರ ಹುಟ್ಟುಹಬ್ಬಕ್ಕೂ ತಟ್ಟಿದ ನೀತಿ ಸಂಹಿತೆ

ಬೆಂಗಳೂರು: ವರನಟ ಡಾ. ರಾಜ್ ಕುಮಾರ್ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ರಾಜ್ ಅಭಿಮಾನಿಗಳು ವಿವಿಧೆಡೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.

ಕಂಠೀರವ ಸ್ಟುಡಿಯೋದಲ್ಲಿ ಅಣ್ಣಾವ್ರ ಜನ್ಮದಿನವನ್ನು ವಿಶೇಷವಾಗಿ ಆಚರಿಸಲಾಗುತ್ತಿದೆ. ರಾಜ್ ಸ್ಮಾರಕದ ಬಳಿ ವಿವಿಧೆಡೆಯಿಂದ ಆಗಮಿಸಿರುವ ಅಭಿಮಾನಿಗಳ ದಂಡೇ ನೆರೆದಿದ್ದು, ನಮನ ಸಲ್ಲಿಸಿದ್ದಾರೆ.

ಪ್ರತಿ ವರ್ಷ ರಾಜ್ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿತ್ತು. ಸಂಭ್ರಮಾಚರಣೆ, ಅನ್ನಸಂತರ್ಪಣೆ ಮೊದಲಾದ ಕಾರ್ಯಕ್ರಮಗಳು ನಡೆಯುತ್ತಿದ್ದವು. ಈ ಬಾರಿ ವಿಧಾನಸಭೆ ಚುನಾವಣೆ ನೀತಿಸಂಹಿತೆ ಕಾರಣದಿಂದ ಅನ್ನಸಂತರ್ಪಣೆ ಇರುವುದಿಲ್ಲ. ಸರಳವಾಗಿ ಹುಟ್ಟುಹಬ್ಬ ಆಚರಿಸಲಾಗುತ್ತಿದೆ.

ರಾಜ್ ಹುಟ್ಟುಹಬ್ಬದ ಹಿನ್ನಲೆಯಲ್ಲಿ ‘ಟಗರು’ ಚಿತ್ರದ ಟಿಕೆಟ್ ದರದಲ್ಲಿ ಶೇ. 50 ರಷ್ಟು ರಿಯಾಯಿತಿ ನೀಡಲಾಗುವುದು. ಇನ್ನು ರವಿವರ್ಮಾ ನಿರ್ದೇಶನದ, ಶಿವಣ್ಣ ಅಭಿನಯದ ‘ರುಸ್ತುಂ’ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಲಾಗುವುದು.

ಅಣ್ಣಾವ್ರ ಹುಟ್ಟುಹಬ್ಬದ ಪ್ರಯುಕ್ತ ಇಂದು ನಡೆಯಬೇಕಿದ್ದ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಚುನಾವಣೆ ನೀತಿಸಂಹಿತೆ ಕಾರಣದಿಂದ ನಡೆಸುತ್ತಿಲ್ಲ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...