alex Certify
ಕನ್ನಡ ದುನಿಯಾ       Mobile App
       

Kannada Duniya

ರಾಖಿ ಸಾವಂತ್ ಬಂಧನಕ್ಕೆ ಪೊಲೀಸರ ದೌಡು

rki-sav

ನವದೆಹಲಿ: ಮಾತೆತ್ತಿದರೆ ಏನೇನೋ ಹೇಳಿ ವಿವಾದ ಮಾಡಿಕೊಳ್ಳುವ ನಟಿ ರಾಖಿ ಸಾವಂತ್ ಸಂಕಷ್ಟಕ್ಕೆ ಸಿಲುಕಿದ್ದಾಳೆ.

ಲೂಧಿಯಾನ ಕೋರ್ಟ್ ಆಕೆಯ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಮಹರ್ಷಿ ವಾಲ್ಮೀಕಿಯವರ ಕುರಿತಾಗಿ ರಾಖಿ ಸಾವಂತ್ ಆಕ್ಷೇಪಾರ್ಹ ಹೇಳಿಕೆಯನ್ನು ನೀಡಿದ್ದ ಹಿನ್ನಲೆಯಲ್ಲಿ ವಾರೆಂಟ್ ಜಾರಿ ಮಾಡಲಾಗಿದೆ.

ಕಳೆದ ವರ್ಷ ಖಾಸಗಿ ವಾಹಿನಿಯೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಖಿ ಮಹರ್ಷಿ ವಾಲ್ಮೀಕಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾಳೆ.

ಇದು ವಾಲ್ಮೀಕಿ ಸಮುದಾಯ ಮತ್ತು ಅನುಯಾಯಿಗಳ ಭಾವನೆಗೆ ಧಕ್ಕೆ ತಂದಿದೆ ಎಂದು ದೂರು ದಾಖಲಾಗಿತ್ತು. ಹಲವು ಬಾರಿ ನೋಟಿಸ್ ಜಾರಿಯಾದರೂ ರಾಖಿ ಸಾವಂತ್ ಕೋರ್ಟ್ ಗೆ ಹಾಜರಾಗಿರಲಿಲ್ಲ.

ಮಾರ್ಚ್ 9 ರಂದು ಕೂಡ ಅರೆಸ್ಟ್ ವಾರೆಂಟ್ ಜಾರಿಯಾಗಿತ್ತು. ಈಗ ಲೂಧಿಯಾನ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದ್ದು, ಆಕೆಯ ಬಂಧನಕ್ಕೆ ಪೊಲೀಸರು ಮುಂಬೈಗೆ ತೆರಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...