alex Certify
ಕನ್ನಡ ದುನಿಯಾ       Mobile App
       

Kannada Duniya

ಮತ್ತೆ ಹರಿದಾಡಿದೆ ‘ಕಿರಿಕ್ ಪಾರ್ಟಿ’ ಜೋಡಿಯ ಸುದ್ದಿ

kirik-r-m

ಸೂಪರ್ ಹಿಟ್ ಸಿನಿಮಾ ‘ಕಿರಿಕ್ ಪಾರ್ಟಿ’ಯ ರಕ್ಷಿತ್ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ ಅವರು ಮದುವೆಯಾಗಲಿದ್ದಾರೆ ಎಂಬ ಸುದ್ದಿ ಕೆಲದಿನಗಳ ಹಿಂದೆ ಹರಿದಾಡಿತ್ತು.

ಆದರೆ, ಇಬ್ಬರೂ ಅದನ್ನು ಸಾರಾಸಗಟಾಗಿ ನಿರಾಕರಿಸಿ, ನಾವಿನ್ನು ಚಿತ್ರರಂಗದಲ್ಲಿ ಬೆಳೆಯಬೇಕಿರುವುದರಿಂದ ಸದ್ಯಕ್ಕೆ ಲವ್, ಮದುವೆ ಬಗ್ಗೆ ಯೋಚಿಸಿಲ್ಲ ಎಂದು ಸ್ಪಷ್ಟಪಡಿಸಿದ್ದರು.

ಈಗ ಹರಿದಾಡುತ್ತಿರುವ ಮಾಹಿತಿಯಂತೆ ರಕ್ಷಿತ್ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ ಅವರ ನಿಶ್ಚಿತಾರ್ಥ ಜುಲೈನಲ್ಲಿ ನಡೆಯಲಿದೆ.

ರಶ್ಮಿಕಾ ಮಂದಣ್ಣ ತೆಲುಗು ಸೇರಿದಂತೆ ಹಲವು ಚಿತ್ರಗಳಲ್ಲಿ ತೊಡಗಿಕೊಂಡಿದ್ದಾರೆ. ರಕ್ಷಿತ್ ಶೆಟ್ಟಿ ‘ಶ್ರೀಮನ್ನಾರಾಯಣ’ ಚಿತ್ರದಲ್ಲಿ ಬ್ಯುಸಿಯಾಗಿದ್ದು, ಅದು ಮಗಿದ ಬಳಿಕ ಕಿಚ್ಚ ಸುದೀಪ್ ಅವರ ಸಿನಿಮಾ ನಿರ್ದೇಶಿಸಲಿದ್ದಾರೆ.

ಇಬ್ಬರೂ ಚಿತ್ರರಂಗದಲ್ಲಿ ಬ್ಯುಸಿಯಾಗಿದ್ದು, ಇದರ ನಡುವೆಯೇ ಜುಲೈನಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಆ ನಂತರ ತಮ್ಮ ಚಿತ್ರಗಳನ್ನು ಮುಗಿಸಿ ಮದುವೆಗೆ ದಿನಾಂಕ ಫಿಕ್ಸ್ ಮಾಡಲಾಗುತ್ತದೆ ಎಂದು ಹೇಳಲಾಗಿದೆ.

‘ಕಿರಿಕ್ ಪಾರ್ಟಿ’ಯ ಯಶಸ್ವಿ ಜೋಡಿಯಾಗಿರುವ ರಕ್ಷಿತ್ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣ ನಿಜ ಜೀವನದಲ್ಲಿಯೂ ಜೊತೆಯಾಗಲಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...