alex Certify
ಕನ್ನಡ ದುನಿಯಾ       Mobile App
       

Kannada Duniya

ವಿದ್ಯಾರ್ಥಿಗಳ ಜೊತೆ ಸಖತ್ ಸ್ಟೆಪ್ ಹಾಕಿದ ರಮ್ಯಾ

ramya 1

ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾ ಅವರು ವಿದ್ಯಾರ್ಥಿಗಳೊಂದಿಗೆ ಡ್ಯಾನ್ಸ್ ಮಾಡುವ ಮೂಲಕ ಗಮನ ಸೆಳೆದರು. ವಿಜಯಪುರದ ಬಿ ಎಲ್ ಡಿ ಇ ಕಾಲೇಜ್ ನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮಕ್ಕೆ ರಮ್ಯಾ ಬಂದಿದ್ದರಿಂದ ಅಭಿಮಾನಿಗಳ ಸಂಖ್ಯೆಯೂ ಹೆಚ್ಚಾಗಿತ್ತು.

ವೇದಿಕೆ ಕಾರ್ಯಕ್ರಮದಲ್ಲಿ ಸೀರೆಯುಟ್ಟು ಕಂಗೊಳಿಸಿದ ರಮ್ಯಾ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಬಳಿಕ ಆರಂಭವಾದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಿಧ ಸಿನಿಮಾ ಹಾಡುಗಳಿಗೆ ಡ್ಯಾನ್ಸ್ ಮಾಡಿ ರಂಜಿಸಿದರು. ಕಾರ್ಯಕ್ರಮ ವೀಕ್ಷಿಸುತ್ತಿದ್ದ ರಮ್ಯಾ ಅವರಿಗೆ ವಿದ್ಯಾರ್ಥಿಗಳು ನೀವೂ ಬನ್ನಿ ಎಂದು ಮನವಿ ಮಾಡಿದರು. ಆಗ ವೇದಿಕೆ ಏರಿದ ರಮ್ಯಾ ‘ಸೇವಂತಿ ಸೇವಂತಿ’ ಸಿನಿಮಾ ಹಾಡಿಗೆ ವಿದ್ಯಾರ್ಥಿಗಳೊಂದಿಗೆ ಸ್ಟೆಪ್ ಹಾಕಿದರು.

ನಂತರ ವಿವಿಧ ಹಾಡುಗಳಿಗೆ ಒಂದೆರಡು ಹೆಜ್ಜೆ ಹಾಕಿದ ಅವರಿಗೆ ವಿದ್ಯಾರ್ಥಿಗಳು ಕೂಡ ಜೊತೆಯಾಗಿದ್ದರು. ರಮ್ಯಾ ಅವರು ಬಂದಿದ್ದರಿಂದ ಅಭಿಮಾನಿಗಳು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದರು. ಮಂಡ್ಯದಲ್ಲಿ ಸಕ್ರಿಯ ರಾಜಕಾರಣದಲ್ಲಿ ತೊಡಗಿರುವ ಅವರು ಬಿಡುವು ಮಾಡಿಕೊಂಡು ಕಾರ್ಯಕ್ರಮಕ್ಕೆ ಆಗಮಿಸಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...