alex Certify
ಕನ್ನಡ ದುನಿಯಾ       Mobile App
       

Kannada Duniya

ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ: ರಮ್ಯಾ ಹೇಳಿದ್ದೇನು…?

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಜಕೀಯ ಚಟುವಟಿಕೆಗಳು ಜೋರಾಗಿವೆ. ಮಂಡ್ಯ ಲೋಕಸಭೆ ಕ್ಷೇತ್ರದ ಮಾಜಿ ಸಂಸದೆ, ಎ.ಐ.ಸಿ.ಸಿ. ಸೋಷಿಯಲ್ ಮೀಡಿಯಾ ವಿಭಾಗದ ಮುಖ್ಯಸ್ಥೆ ರಮ್ಯಾ ಅವರ ಸ್ಪರ್ಧೆ ಕುರಿತಾಗಿಯೂ ಮಾತುಗಳು ಕೇಳಿ ಬರ್ತಿವೆ.

ಮಂಡ್ಯಕ್ಕೆ ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ಆಗಮಿಸಿದ್ದ ಸಂದರ್ಭದಲ್ಲಿ ರಮ್ಯಾ ಕಾಣಿಸಿಕೊಂಡಿರಲಿಲ್ಲ. ಇದು ಕೂಡ ಚರ್ಚೆಗೆ ಕಾರಣವಾಗಿತ್ತು.

ರಮ್ಯಾ ಅವರ ತಾಯಿ ಮಂಡ್ಯ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಕುರಿತು ಈಗಾಗಲೇ ತಿಳಿಸಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತಾದ ಗೊಂದಲಗಳಿಗೆ ರಮ್ಯಾ ಅವರೇ ತೆರೆ ಎಳೆದಿದ್ದಾರೆ. ಸದ್ಯಕ್ಕೆ ಸಕ್ರಿಯ ಚುನಾವಣೆ ರಾಜಕಾರಣಕ್ಕೆ ಬರುವ ಉದ್ದೇಶವಿಲ್ಲ. ಸೋಷಿಯಲ್ ಮೀಡಿಯಾ ವಿಭಾಗದಲ್ಲಿ ತೊಡಗಿಕೊಂಡಿದ್ದೇನೆ ಎಂದು ಹೇಳಿದ್ದಾರೆ.

ಸೋಷಿಯಲ್ ಮೀಡಿಯಾ ವಿಭಾಗದಲ್ಲಿ ಖುಷಿಯಿಂದ ಕೆಲಸ ಮಾಡುತ್ತಿದ್ದೇನೆ. ವಿಧಾನಸಭೆ ಚುನಾವಣೆಯಲ್ಲಿಯೂ ಸಕ್ರಿಯವಾಗಿ ಕೆಲಸ ಮಾಡುತ್ತೇನೆ. ಸ್ಪರ್ಧಿಸುವುದೇ ರಾಜಕೀಯವಲ್ಲ. ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...