alex Certify
ಕನ್ನಡ ದುನಿಯಾ       Mobile App
       

Kannada Duniya

ಚಿತ್ರರಂಗಕ್ಕೆ ಮತ್ತೆ ಮರಳಲಿದ್ದರಾ ಮೋಹಕ ತಾರೆ ರಮ್ಯಾ?

ಕನ್ನಡ ಚಿತ್ರರಂಗದ ಮೋಹಕ ತಾರೆ ರಮ್ಯಾ ರಾಜಕೀಯ ಕ್ಷೇತ್ರಕ್ಕೆ ಕಾಲಿಟ್ಟ ಬಳಿಕ ಚಿತ್ರರಂಗದಿಂದ ಬಹುತೇಕ ನೇಪಥ್ಯಕ್ಕೆ ಸರಿದಿದ್ದರು. ಮಂಡ್ಯ ಲೋಕಸಭಾ ಸದಸ್ಯರಾಗಿ ರಮ್ಯಾ ಆಯ್ಕೆಯಾದ ನಂತರ ರಾಜಕೀಯ ರಂಗದಲ್ಲೇ ಅವರು ಮುಂದುವರೆಯಲಿದ್ದಾರೆಂದು ಭಾವಿಸಲಾಗಿತ್ತು.

ಆದರೆ, ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡ ಬಳಿಕ ರಮ್ಯಾ ಎಲ್ಲಿಯೂ ಬಹಿರಂಗವಾಗಿ ಕಾಣಿಸಿಕೊಳ್ಳದೆ ರಾಜಕೀಯ ಕ್ಷೇತ್ರದಿಂದ ಹಿಂದೆ ಸರಿದಿದ್ದಾರಾ ಎಂಬ ಅನುಮಾನಕ್ಕೆ ಕಾರಣವಾಗಿದ್ದರು.

ಆ ಬಳಿಕ ರಮ್ಯಾ ಅವರಿಗೆ ಕಾಂಗ್ರೆಸ್ ಹೈಕಮಾಂಡ್, ಪಕ್ಷದ ಸೋಶಿಯಲ್ ಮೀಡಿಯಾ ವಿಭಾಗದಲ್ಲಿ ಕಾರ್ಯ ನಿರ್ವಹಿಸುವಂತಹ ದೊಡ್ಡ ಜವಾಬ್ದಾರಿ ನೀಡಿದ್ದು, ಅದನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಹೋಗುತ್ತಿದ್ದಾರೆ.

ಇದರ ಮಧ್ಯೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದಿದೆ. ಜೊತೆಗೆ ಲೋಕಸಭಾ ಚುನಾವಣೆಯಲ್ಲೂ ಇದೇ ಮೈತ್ರಿ ಮುಂದುವರೆಯಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಒಂದೊಮ್ಮೆ ಮೈತ್ರಿ ಏರ್ಪಟ್ಟರೆ ರಮ್ಯಾ ಅವರು ಪ್ರತಿನಿಧಿಸಿದ್ದ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟು ಕೊಡಬೇಕಾಗುತ್ತದೆ. ಹೀಗಾಗಿಯೇ ಏನೋ ನಟಿ ರಮ್ಯಾ ಅವರು ಇತ್ತೀಚೆಗೆ ಮಾಡಿರುವ ಟ್ವೀಟ್ ಒಂದರಲ್ಲಿ 2019 ರಲ್ಲಿ ತಾವು ಚಿತ್ರರಂಗಕ್ಕೆ ಮರಳುವ ಸೂಚನೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...