alex Certify
ಕನ್ನಡ ದುನಿಯಾ       Mobile App
       

Kannada Duniya

‘ಕೆಜಿಎಫ್’ ಟ್ರೇಲರ್ ಕುರಿತು ರಾಕಿಂಗ್ ಸ್ಟಾರ್ ಯಶ್ ಹೇಳಿದ್ದೇನು?

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಸ್ಯಾಂಡಲ್‍ವುಡ್ ನ ಬಹು ನಿರೀಕ್ಷಿತ ‘ಕೆಜಿಎಫ್’ ಚಿತ್ರದ ಟ್ರೇಲರ್ ಅಕ್ಟೋಬರ್ ನಲ್ಲಿ ಬಿಡುಗಡೆಯಾಗಲಿದೆ. ಹೀಗಂತ ಖುದ್ದು ನಟ ಯಶ್ ಅವರು ಫೇಸ್ ಬುಕ್ ಕಮೆಂಟ್ ನಲ್ಲಿ ತಿಳಿಸಿದ್ದಾರೆ.

ಹೌದು. ಚಿತ್ರದ ಟೀಸರ್, ಪೋಸ್ಟರ್ ಹಾಗೂ ಟೈಟಲ್ ನಿಂದಲೇ ಭಾರೀ ಸದ್ದುಮಾಡಿ, ಕುತೂಹಲ ಇಮ್ಮಡಿಗೊಳಿಸಿರುವ ಕೆಜಿಎಫ್ ಚಿತ್ರದ ಬಿಡುಗಡೆಗಾಗಿ ಅಭಿಮಾನಿಗಳು ತುದಿಗಾಲಲ್ಲಿ ಕಾದುನಿಂತಿದ್ದಾರೆ.

ಈ ಹಿನ್ನಲೆಯಲ್ಲಿ ನಟರಾಜ್ ಗೌಡ ಎಂಬ ಅಭಿಮಾನಿಯೊಬ್ಬರು ಫೇಸ್‍ಬುಕ್ ನಲ್ಲಿ “ಬಾಸ್ ಕೆಜಿಎಫ್ ಟ್ರೇಲರ್ ಯಾವಾಗ ಬರುತ್ತದೆ… ನಾನು ಕಾಯುತ್ತಿದ್ದೇನೆ ಎಂದು ಕೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ರಾಕಿಂಗ್ ಸ್ಟಾರ್ ಯಶ್, “ಅಕ್ಟೋಬರ್ ನಲ್ಲಿ ಟ್ರೇಲರ್ ಬಿಡುಗಡೆಯಾಗುತ್ತದೆ” ಎಂದು ರೀ ಕಮೆಂಟ್ ಮಾಡಿದ್ದಾರೆ.

ಹೊಂಬಾಳೆ ಪ್ರೊಡಕ್ಷನ್ ನಲ್ಲಿ ನಿರ್ಮಾಣವಾಗುತ್ತಿರುವ ಕೆಜಿಎಫ್ ಚಿತ್ರವನ್ನು ಉಗ್ರಂ’ ಖ್ಯಾತಿಯ ಪ್ರಶಾಂತ್ ನೀಲ್ ನಿರ್ದೇಶನ ಮಾಡುತ್ತಿದ್ದು, ಶ್ರೀನಿಧಿ ಶೆಟ್ಟಿ ಯಶ್ ಗೆ ನಾಯಕಿಯಾಗಿ ನಟಿಸಿದ್ದಾರೆ. ಚಿತ್ರದ ಐಟಂ ಸಾಂಗ್ ಒಂದಕ್ಕೆ ಬಾಲಿವುಡ್ ಬೆಡಗಿ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಕೂಡ ಹೆಜ್ಜೆ ಹಾಕಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...