alex Certify
ಕನ್ನಡ ದುನಿಯಾ       Mobile App
       

Kannada Duniya

ಆರ್.ಆರ್. ನಗರದಲ್ಲಿ ಮತ ಚಲಾವಣೆ ಮಾಡದ ದರ್ಶನ್, ಕಾರಣವೇನು ಗೊತ್ತಾ?

ಚುನಾವಣಾ ಅಕ್ರಮ ಕೇಳಿ ಬಂದ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಇಂದು ನಡೆಯುತ್ತಿದೆ.

ಕಾಂಗ್ರೆಸ್ ಅಭ್ಯರ್ಥಿಯಾಗಿ ಮುನಿರತ್ನ, ಜೆಡಿಎಸ್ ಅಭ್ಯರ್ಥಿಯಾಗಿ ರಾಮಚಂದ್ರ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ ತುಳಸಿ ಮುನಿರಾಜು ಕಣದಲ್ಲಿದ್ದು, ಮತದಾನ ಚುರುಕಿನಿಂದ ನಡೆಯುತ್ತಿದೆ.

ನಟಿ ಅಮೂಲ್ಯ ತಮ್ಮ ಹಕ್ಕು ಚಲಾಯಿಸಿದ್ದು, ತಮ್ಮ ಮಾವ ಜೆಡಿಎಸ್ ಅಭ್ಯರ್ಥಿ ರಾಮಚಂದ್ರರವರು ಗೆಲ್ಲುವುದು ನಿಶ್ಚಿತ ಎಂದು ಹೇಳಿದ್ದಾರೆ.

ಈ ಮಧ್ಯೆ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ನಿವಾಸಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಂದು ತಮ್ಮ ಮತ ಚಲಾವಣೆ ಮಾಡುತ್ತಿಲ್ಲವೆಂದು ತಿಳಿದುಬಂದಿದೆ. ಯಜಮಾನ ಚಿತ್ರದ ಶೂಟಿಂಗ್ ಗಾಗಿ ಮುಂಬೈಗೆ ತೆರಳಿರುವ ದರ್ಶನ್ ಮತದಾನ ಮಾಡಲು ಆಗಮಿಸಲು ಸಾಧ್ಯವಾಗಿಲ್ಲ ಎನ್ನಲಾಗಿದ್ದು, ಒಂದು ವೇಳೆ ಶೂಟಿಂಗ್ ಪೂರ್ಣಗೊಂಡರೆ ಬೆಂಗಳೂರಿಗೆ ಆಗಮಿಸಿ ತಮ್ಮ ಮತ ಚಲಾಯಿಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...