alex Certify
ಕನ್ನಡ ದುನಿಯಾ       Mobile App
       

Kannada Duniya

‘ರುಸ್ತುಂ’ ಶಿವಣ್ಣ ಎದುರು ಖಡಕ್ ವಿಲನ್ ಗಳ ಅಬ್ಬರ

ಕನ್ನಡ, ಹಿಂದಿ ಸೇರಿದಂತೆ ವಿವಿಧ ಭಾಷೆಯ ಚಿತ್ರಗಳಲ್ಲಿ ಸಾಹಸ ನಿರ್ದೇಶಕರಾಗಿ ಗಮನಸೆಳೆದಿರುವ ರವಿವರ್ಮಾ ನಿರ್ದೇಶನದಲ್ಲಿ ‘ರುಸ್ತುಂ’ ಚಿತ್ರ ಮೂಡಿಬರುತ್ತಿದ್ದು, ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಪೊಲೀಸ್ ಆಫೀಸರ್ ಪಾತ್ರದಲ್ಲಿ ಮಿಂಚಲಿದ್ದಾರೆ.

ಸೂರಿ ನಿರ್ದೇಶನದ ‘ಟಗರು’ ಚಿತ್ರದಲ್ಲಿ ಸೂಪರ್ ಕಾಪ್ ಆಗಿ ಕಾಣಿಸಿಕೊಂಡಿದ್ದ ಶಿವಣ್ಣ ಮತ್ತೆ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಾಯಕಿಯಾಗಿ ಶ್ರದ್ಧಾ ಶ್ರೀನಾಥ್, ತಂಗಿಯ ಪಾತ್ರದಲ್ಲಿ ಮಯೂರಿ ಅಭಿನಯಿಸಲಿದ್ದು, ವಿವಿಧ ಭಾಷೆಗಳ ಖಡಕ್ ವಿಲನ್ ಗಳು ಗರ್ಜಿಸಲಿದ್ದಾರೆ.

ಜೆ. ಮಹೇಂದ್ರನ್, ಹರೀಶ್ ಉತ್ತಮನ್, ಅರ್ಜುನ್ ಗೌಡ ವಿಲನ್ ರೋಲ್ ನಲ್ಲಿ ಕಾಣಿಸಿಕೊಳ್ಳಿದ್ದಾರೆ. ರವಿವರ್ಮಾ ‘ರುಸ್ತುಂ’ ಚಿತ್ರಕ್ಕಾಗಿ ಪೂರ್ವ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಚಿತ್ರದ ಕುರಿತಾಗಿ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...