alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿನ್ ಚಿತ್ರದ ಪ್ರೀಮಿಯರ್ ಶೋನಲ್ಲಿ ಮಿಂಚಿದ ಸ್ಟಾರ್ಸ್

3_1028_1495637981_749x421

ಸಚಿನ್ ಎ ಬಿಲಿಯನ್ ಡ್ರೀಮ್ಸ್ ಚಿತ್ರದ ಪ್ರೀಮಿಯರ್ ಶೋ ಮುಂಬೈನಲ್ಲಿ ಬುಧವಾರ ನಡೆದಿದೆ. ಟೀಂ ಇಂಡಿಯಾದ ಆಟಗಾರರು ಈ ಪ್ರೀಮಿಯರ್ ಶೋನಲ್ಲಿ ಪಾಲ್ಗೊಂಡಿದ್ದರು. ಬಾಲಿವುಡ್ ಸ್ಟಾರ್ಸ್ ಕೂಡ ಪ್ರೀಮಿಯರ್ ಶೋನ ರೆಡ್ ಕಾರ್ಪೆಟ್ ನಲ್ಲಿ ಮಿಂಚಿದ್ದಾರೆ.

ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್, ನಟ ಅಭಿಷೇಕ್ ಬಚ್ಚನ್, ನಟಿ ಐಶ್ವರ್ಯ ರೈ ಬಚ್ಚನ್, ಶಾರುಖ್ ಖಾನ್, ಆಮೀರ್ ಖಾನ್ ಸೇರಿದಂತೆ ಬಾಲಿವುಡ್ ಪ್ರಸಿದ್ಧ ಕಲಾವಿದರ ಜೊತೆ ನಿರ್ದೇಶಕರು, ನಿರ್ಮಾಪಕರು ಕೂಡ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಗೆ ಶುಭ ಹಾರೈಸಿದ್ದಾರೆ.anushka_

ಇಲ್ಲಿ ವಿಶೇಷ ಗಮನ ಸೆಳೆದಿದ್ದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾ. ಸಚಿನ್ ಎ ಬಿಲಿಯನ್ ಡ್ರೀಮ್ಸ್ ಪ್ರೀಮಿಯರ್ ನಲ್ಲಿ ಅನುಷ್ಕಾ ಹಾಟ್ ಅವತಾರದಲ್ಲಿ ಕಾಣಿಸಿಕೊಂಡಿದ್ದಳು. ಎಂ.ಎಸ್. ಧೋನಿ, ಯುವರಾಜ್ ಸಿಂಗ್, ಅಜಿಂಕ್ಯಾ ರಹಾನೆ, ರವೀಂದ್ರ ಜಡೇಜಾ, ಆರ್.ಅಶ್ವಿನ್, ಶಿಖರ್ ಧವನ್, ಭುವನೇಶ್ವರ್ ಕುಮಾರ್ ಸೇರಿದಂತೆ ಟೀಂ ಇಂಡಿಯಾ ಆಟಗಾರರು ಪ್ರೀಮಿಯರ್ ಶೋನಲ್ಲಿ ಪಾಲ್ಗೊಂಡು ಶುಭ ಹಾರೈಸಿದ್ರು.1_555_052417102333

ಚಿತ್ರ ತುಂಬಾ ಚೆನ್ನಾಗಿದ್ದು, ವರ್ಲ್ಡ್ ಕಪ್ ದಿನವನ್ನು ನೆನಪು ಮಾಡ್ತು. ಸಚಿನ್ ಸದಾ ನಮ್ಮ ನೆನಪಿನಲ್ಲಿರ್ತಾರೆಂದು ಯುವರಾಜ್ ಹೇಳಿದ್ರೆ, ಇದೊಂದು ಮಾದರಿ ಚಿತ್ರ. ಯುವಜನತೆಗೆ ಪ್ರೋತ್ಸಾಹ ನೀಡುತ್ತದೆ ಎಂದು ಕೊಹ್ಲಿ ಹೇಳಿದ್ದಾರೆ. ಸಚಿನ್ ಬದುಕನ್ನು ತೆರೆ ಮೇಲೆ ನೋಡಲು ತುಂಬಾ ಖುಷಿಯಾಯ್ತು ಎಂದು ಧೋನಿ ಪ್ರತಿಕ್ರಿಯೆ ನೀಡಿದ್ದಾರೆ. ಚಿತ್ರ ಶುಕ್ರವಾರ ಮೇ 26ರಂದು ತೆರೆಗೆ ಬರ್ತಾ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...