alex Certify
ಕನ್ನಡ ದುನಿಯಾ       Mobile App
       

Kannada Duniya

ಬೀದಿಪಾಲಾದ ಹಿರಿಯ ನಟನಿಗೆ ಕಿಚ್ಚನ ನೆರವು

sadasih

ಸುಮಾರು 500 ಕ್ಕೂ ಅಧಿಕ ಚಿತ್ರಗಳಲ್ಲಿ ಅಭಿನಯಿಸಿರುವ ಹಿರಿಯ ನಟ ಸದಾಶಿವ ಬ್ರಹ್ಮಾವರ್ ಕುಟುಂಬದವರಿಂದ ನಿರ್ಲಕ್ಷ್ಯಕ್ಕೆ ಒಳಗಾಗಿ ಊರೂರು ಅಲೆಯುತ್ತಿದ್ದು, ಅವರಿಗೆ ಕಿಚ್ಚ ಸುದೀಪ್ ನೆರವಿನ ಹಸ್ತ ಚಾಚಿದ್ದಾರೆ ಎನ್ನಲಾಗಿದೆ.

ಒಂದು ಕಾಲದಲ್ಲಿ ಬಿಡುವಿಲ್ಲದ ನಟರಾಗಿದ್ದ ಸದಾಶಿವ ಬ್ರಹ್ಮಾವರ್ ಈಗ ಕುಟುಂಬದವರಿಂದ ದೂರವಾಗಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಕುಮಟಾದಲ್ಲಿ ಕಾಣಿಸಿಕೊಂಡಿದ್ದ ಅವರು ಬಳಲಿದ್ದರು. ಹಣ, ಊಟವಿಲ್ಲದೇ ಸಂಕಷ್ಟದಲ್ಲಿದ್ದ ಅವರಿಗೆ ಸ್ಥಳೀಯರು ಹಣ, ಊಟ ಕೊಟ್ಟಿದ್ದಾರೆ.

ಅಲ್ಲಿಂದ ಹುಬ್ಬಳ್ಳಿಗೆ ತೆರಳುವುದಾಗಿ ಸದಾಶಿವ ಬ್ರಹ್ಮಾವರ್ ಬಸ್ ಹತ್ತಿದ್ದಾರೆ. ಆದರೆ, ಅವರು ಹುಬ್ಬಳ್ಳಿಗೆ ಹೋಗದೇ ಮಾರ್ಗಮಧ್ಯದಲ್ಲೇ ಇಳಿದಿದ್ದಾರೆ ಎನ್ನಲಾಗಿದೆ.

ಈ ವಿಚಾರ ಎಲ್ಲೆಡೆ ವ್ಯಾಪಕವಾಗಿ ಹರಿದಾಡಿದೆ. ಸೋಷಿಯಲ್ ಮೀಡಿಯಾದಲ್ಲಿಯೂ ವೈರಲ್ ಆಗಿದೆ. ಇದನ್ನು ಗಮನಿಸಿದ ಸುದೀಪ್, ಕೂಡಲೇ ಸದಾಶಿವ ಬ್ರಹ್ಮಾವರ ಅವರನ್ನು ಪತ್ತೆ ಮಾಡಿ ಅವರಿಗೆ ಆಶ್ರಯ ನೀಡುವಂತೆ ತಮ್ಮ ಅಭಿಮಾನಿಗಳಿಗೆ ಸೂಚಿಸಿದ್ದಾರೆ.

ಸದ್ಯ ಚಿತ್ರೀಕರಣಕ್ಕೆಂದು ವಿದೇಶಕ್ಕೆ ತೆರಳಿರುವ ಸುದೀಪ್, ತಮ್ಮ ಅಭಿಮಾನಿ ಸಂಘದ ಪ್ರಮುಖರಿಗೆ ಈ ಕುರಿತು ಮಾಹಿತಿ ನೀಡಿ, ಸದಾಶಿವ ಬ್ರಹ್ಮಾವರ್ ಅವರನ್ನು ಎಲ್ಲಾ ಕಡೆ ಹುಡುಕಿ ಅವರಿಗೆ ನೆರವಾಗುವಂತೆ ಸೂಚಿಸಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...