alex Certify
ಕನ್ನಡ ದುನಿಯಾ       Mobile App
       

Kannada Duniya

ಸಲ್ಮಾನ್-ಕರಣ್ ಚಿತ್ರಕ್ಕೆ ಹೀರೋ ಆಗಲಿದ್ದಾರೆ ಅಕ್ಷಯ್

akshay-salman-karan

ಬಾಲಿವುಡ್ ನಟ ಸಲ್ಮಾನ್ ಖಾನ್, ಅಕ್ಷಯ್ ಕುಮಾರ್ ಹಾಗೂ ಕರಣ್ ಜೋಹರ್ ಅಭಿಮಾನಿಗಳಿಗೊಂದು ಖುಷಿ ಸುದ್ದಿ. ಈ ಮೂವರು ಸ್ಟಾರ್ ಗಳನ್ನು ಒಟ್ಟಿಗೆ ನೋಡುವ ಅವಕಾಶ ನಿಮಗೆ ಸಿಗ್ತಾ ಇದೆ.

ಸಲ್ಮಾನ್ ಖಾನ್ ಹಾಗೂ ಕರಣ್ ನಿರ್ಮಾಣದ ಹೊಸ ಚಿತ್ರದಲ್ಲಿ ಅಕ್ಷಯ್ ನಾಯಕನ ಪಾತ್ರದಲ್ಲಿ ಮಿಂಚಲಿದ್ದಾರೆ. ಹೀರೋಯಿನ್ ಯಾರು ಎಂಬುದನ್ನು ಚಿತ್ರತಂಡ ಬಹಿರಂಗಪಡಿಸಿಲ್ಲ.

ಸಲ್ಮಾನ್ ಖಾನ್ ಹಾಗೂ ಅಕ್ಷಯ್ ಕುಮಾರ್ ಬಾಲಿವುಡ್ ನ ಸೂಪರ್ ಸ್ಟಾರ್ ಗಳು. ಇನ್ನು ಕರಣ್ ಜೋಹರ್ ಬಾಲಿವುಡ್ ನ ಸೂಪರ್ ಹಿಟ್ ಚಿತ್ರ ತಯಾರಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕರಣ್ ತಮ್ಮ ಧರ್ಮ ಪ್ರೊಡಕ್ಷನ್ ಮೂಲಕ ಚಿತ್ರ ನಿರ್ಮಾಣ ಮಾಡ್ತಿದ್ದಾರೆ. ಇನ್ನು ಸಲ್ಮಾನ್ ಖಾನ್ ‘ಭಜರಂಗಿ ಭಾಯಿಜಾನ್’ ಮೂಲಕ ಚಿತ್ರ ನಿರ್ಮಾಣಕ್ಕಿಳಿದಿದ್ದಾರೆ.

ಕರಣ್ ಹಾಗೂ ಅಕ್ಷಯ್ ಟ್ವೀಟರ್ ಮೂಲಕ ಈ ವಿಷಯವನ್ನು ಅಭಿಮಾನಿಗಳಿಗೆ ತಿಳಿಸಿದ್ದಾರೆ. ನನ್ನ ಇಬ್ಬರು ಸ್ನೇಹಿತರಾದ ಸಲ್ಮಾನ್ ಖಾನ್ ಹಾಗೂ ಕರಣ್ ಹೊಸ ಚಿತ್ರವನ್ನು ನಿರ್ಮಾಣ ಮಾಡ್ತಿದ್ದಾರೆ. ಇದ್ರಲ್ಲಿ ನಾನು ನಟಿಸುತ್ತಿದ್ದೇನೆ. ಚಿತ್ರ 2018 ರಲ್ಲಿ ತೆರೆಗೆ ಬರಲಿದೆ ಎಂದು ಅಕ್ಷಯ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ಅನುರಾಗ್ ಸಿಂಗ್ ಚಿತ್ರವನ್ನು ನಿರ್ದೇಶನ ಮಾಡಲಿದ್ದಾರೆಂದು ಕರಣ್ ಟ್ವೀಟ್ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...