alex Certify
ಕನ್ನಡ ದುನಿಯಾ       Mobile App
       

Kannada Duniya

ಸಲ್ಮಾನ್ ಖಾನ್ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಗೆ ನುಗ್ಗಿದ್ದ ಅಪರಿಚಿತ

inside_salman_khan_house_4_1497165162_749x421

ಬಾಲಿವುಡ್ ದಬಾಂಗ್ ಭಾಯ್ ಸಲ್ಮಾನ್ ಖಾನ್ ವಾಸವಾಗಿರುವ ಮುಂಬೈ ಬಾಂದ್ರಾದಲ್ಲಿರುವ ಗ್ಯಾಲಕ್ಸಿ ಅಪಾರ್ಟ್ಮೆಂಟ್ ನಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಶನಿವಾರ ತಡರಾತ್ರಿ ಸಲ್ಮಾನ್ ಖಾನ್ ವಾಸವಾಗಿರುವ ಗ್ಯಾಲಕ್ಸಿ ಅಪಾರ್ಟ್ ಮೆಂಟ್ ಗೆ ಅಪರಿಚಿತ ವ್ಯಕ್ತಿಯೊಬ್ಬ ಪ್ರವೇಶ ಮಾಡಿ ಗೊಂದಲ ಸೃಷ್ಟಿಸಿದ್ದ.

ಗ್ಯಾಲಕ್ಸಿ ಅಪಾರ್ಟ್ಮೆಂಟ್ ಭದ್ರತಾ ಸಿಬ್ಬಂದಿ ಕಣ್ಣುತಪ್ಪಿಸಿ ವ್ಯಕ್ತಿಯೊಬ್ಬ ಅಪಾರ್ಟ್ಮೆಂಟ್ ಒಳಗೆ ಪ್ರವೇಶ ಮಾಡಿದ್ದ. 25 ವರ್ಷದ ಮೊಹಮ್ಮದ್ ಸಿರಾಜುದ್ದೀನ್ ಅಪಾರ್ಟ್ಮೆಂಟ್ ನ ಶೌಚಾಲಯ ಬಳಸ್ತಾ ಇದ್ದ. ಇದನ್ನು ನೋಡಿದವರು ಸಿಬ್ಬಂದಿಗೆ ತಿಳಿಸಿದ್ದಾರೆ. ಭದ್ರತಾ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂದ ಪೊಲೀಸರು ಮೊಹಮ್ಮದ್ ನನ್ನು ವಶಕ್ಕೆ ಪಡೆದಿದ್ದರು. ದೂರು ದಾಖಲಾಗದ ಹಿನ್ನೆಲೆಯಲ್ಲಿ ಸಿರಾಜುದ್ದೀನ್ ನನ್ನು ಬಿಡಲಾಗಿದೆ. ಈತ ಮಾನಸಿಕ ಅಸ್ವಸ್ಥ ಎಂದು ಪೊಲೀಸರು ಹೇಳಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...