alex Certify
ಕನ್ನಡ ದುನಿಯಾ       Mobile App
       

Kannada Duniya

ದಂಗಾಗುವಂತಿದೆ ಸಲ್ಮಾನ್ ಖಾನ್ ‘ಸುಲ್ತಾನ್’ ಗಳಿಕೆ

sultan salman

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅಭಿನಯದ ಇತ್ತೀಚಿನ ಚಿತ್ರಗಳೆಲ್ಲಾ, ಗಳಿಕೆಯಲ್ಲಿ ಹೊಸ ದಾಖಲೆಯನ್ನೇ ಬರೆಯುತ್ತಿವೆ. ಸಲ್ಮಾನ್ ಕುಸ್ತಿಪಟುವಾಗಿ ಕಾಣಿಸಿಕೊಂಡಿರುವ ‘ಸುಲ್ತಾನ್’ ಬಾಕ್ಸ್ ಆಫೀಸ್ ಗಳಿಕೆಯಲ್ಲಿ ಮತ್ತೊಂದು ದಾಖಲೆ ಬರೆದಿದೆ.

ಸಲ್ಮಾನ್ ಖಾನ್, ಅನುಷ್ಕಾ ಶರ್ಮ ಅಭಿನಯದ ‘ಸುಲ್ತಾನ್’ ಇದುವರೆಗೆ 585 ಕೋಟಿ ರೂಪಾಯಿ ಗಳಿಸುವ ಮೂಲಕ ಬಾಲಿವುಡ್ ನಲ್ಲಿ ಅತಿಹೆಚ್ಚು ಗಳಿಕೆ ಮಾಡಿದ ಚಿತ್ರಗಳ ಸಾಲಿಗೆ ಸೇರಿದೆ. ಅಮೀರ್ ಖಾನ್ ಅಭಿನಯದ ‘ಪಿಕೆ’ 792 ಕೋಟಿ ರೂ.ಗಳಿಸಿ ಬಾಲಿವುಡ್ ನಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರಗಳಲ್ಲಿ ಮೊದಲ ಸಾಲಿನಲ್ಲಿದೆ. ಸಲ್ಮಾನ್ ಅಭಿನಯದ ‘ಭಜರಂಗಿ ಭಾಯಿಜಾನ್’ 626 ಕೋಟಿ ರೂ. ಗಳಿಸಿದ್ದರೆ, ಅಮೀರ್ ಖಾನ್ ಅಭಿನಯದ ‘ಧೂಮ್-3’ 542 ಕೋಟಿ ರೂ ಗಳಿಸಿದೆ.

ಸೌತ್ ಇಂಡಿಯಾ ಸಿನಿಮಾಗಳು ಕೂಡ ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ ದಾಖಲೆ ಬರೆದಿವೆ. ರಜನಿಕಾಂತ್ ಅಭಿನಯದ ‘ಕಬಾಲಿ’ ಹಾಗೂ ಪ್ರಭಾಸ್ ಅಭಿನಯದ ‘ಬಾಹುಬಲಿ’ ಕೂಡ ಹೆಚ್ಚು ಗಳಿಕೆ ಮಾಡಿವೆ. ‘ಸುಲ್ತಾನ್’ ಅಬ್ಬರ ಇನ್ನೂ ಮುಂದುವರೆದಿದ್ದು, ಗಳಿಕೆಯಲ್ಲಿ ಹೊಸ ದಾಖಲೆ ಬರೆಯುವ ನಿರೀಕ್ಷೆ ಇದೆ. ಯಶ್ ರಾಜ್ ಸಂಸ್ಥೆ ನಿರ್ಮಾಣದ ಚಿತ್ರಗಳಲ್ಲಿ ಅತಿಹೆಚ್ಚು ಗಳಿಕೆ ಕಂಡ ಚಿತ್ರ ‘ಸುಲ್ತಾನ್’ ಆಗಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...