alex Certify
ಕನ್ನಡ ದುನಿಯಾ       Mobile App
       

Kannada Duniya

ಇಲ್ಲಿದೆ ಸಲ್ಮಾನ್ ಖಾನ್ ಕುರಿತ ಹೊಸ ಸುದ್ದಿ

ttgger

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅಭಿನಯದ ಚಿತ್ರಗಳು, ಬಾಕ್ಸ್ ಆಫೀಸ್ ಗಳಿಕೆಯಲ್ಲಿ ಹೊಸ ದಾಖಲೆ ಬರೆಯುತ್ತಿವೆ. ಇದೀಗ ಬಾಕ್ಸ್ ಆಫೀಸ್ ಸುಲ್ತಾನ್ ಸಲ್ಮಾನ್ ಖಾನ್ ಅವರ ಹೊಸ ಚಿತ್ರ ನಿರೀಕ್ಷೆ ಹೆಚ್ಚಿಸಿದೆ.

ಭಾರೀ ಯಶಸ್ಸು ಕಂಡಿದ್ದ ‘ಏಕ್ ಥಾ ಟೈಗರ್’ ರೀತಿಯಲ್ಲೇ ಹೊಸ ಚಿತ್ರವೂ ಸಂಚಲನ ಮೂಡಿಸುವ ನಿರೀಕ್ಷೆ ಇದೆ. ಸಲ್ಮಾನ್ ಖಾನ್ ಹೊಸ ಚಿತ್ರಕ್ಕೆ ‘ಟೈಗರ್ ಜಿಂದಾ ಹೈ’ ಎಂದು ಹೆಸರಿಡಲಾಗಿದ್ದು, ಈ ಚಿತ್ರದಲ್ಲಿ ಸಲ್ಮಾನ್ 70 ವರ್ಷದ ವೃದ್ಧನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಲಿ ಅಬ್ಬಾಸ್ ಜಾಫರ್ ನಿರ್ದೇಶನದ ಈ ಬಹು ನಿರೀಕ್ಷೆಯ ಚಿತ್ರದಲ್ಲಿ ಕತ್ರಿನಾ ಕೈಫ್ ನಾಯಕಿಯಾಗಿ ನಟಿಸಲಿದ್ದಾರೆ.

ಬಾಲಿವುಡ್ ನಲ್ಲಿ ಸಾಲು, ಸಾಲು ಯಶಸ್ವಿ ಚಿತ್ರಗಳಲ್ಲಿ ಅಭಿನಯಿಸಿರುವ ಸಲ್ಮಾನ್ ಖಾನ್, ವಿಭಿನ್ನ ಪಾತ್ರಗಳ ಮೂಲಕ ಗಮನ ಸೆಳೆದ ನಟರಾಗಿದ್ದಾರೆ. ಇದೀಗ 70 ವರ್ಷದ ವೃದ್ಧನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಕುತೂಹಲ ಮೂಡಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...