alex Certify
ಕನ್ನಡ ದುನಿಯಾ       Mobile App
       

Kannada Duniya

ಸಂಕ್ರಾಂತಿಗೆ ಸಿಹಿ ಸುದ್ದಿ ನೀಡಿದ ದರ್ಶನ್

ಚಾಲೆಂಜಿಂಗ್ ಸ್ಟಾರ್ ದರ್ಶನ್ 50 ನೇ ಚಿತ್ರ ‘ಕುರುಕ್ಷೇತ್ರ’ ಬಳಿಕ ಯಾವ ಚಿತ್ರದಲ್ಲಿ ನಟಿಸಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ದರ್ಶನ್ ಅವರ 51 ನೇ ಚಿತ್ರದ ಮುಹೂರ್ತ ಸಂಕ್ರಾಂತಿಯಂದು ನೆರವೇರಿದೆ.

ಚಂದ್ರಾ ಲೇಔಟ್ ನಲ್ಲಿರುವ ಗಣಪತಿ ದೇವಾಲಯದಲ್ಲಿ ನಡೆದ 51 ನೇ ಚಿತ್ರದ ಮುಹೂರ್ತ ಸಮಾರಂಭದಲ್ಲಿ ದರ್ಶನ್, ರಶ್ಮಿಕಾ ಮಂದಣ್ಣ, ಸಂಗೀತ ನಿರ್ದೇಶಕ ಹರಿಕೃಷ್ಣ, ನಿರ್ದೇಶಕ ಪಿ. ಕುಮಾರ್ ಮೊದಲಾದವರು ಭಾಗವಹಿಸಿದ್ದರು.

ದರ್ಶನ್ ಹಾಗೂ ರಶ್ಮಿಕಾ ಮಂದಣ್ಣ ಅವರು ಮೊದಲ ಬಾರಿಗೆ ಜೊತೆಯಾಗಿ ನಟಿಸುತ್ತಿದ್ದಾರೆ. ಫೆಬ್ರವರಿಯಿಂದ ಚಿತ್ರೀಕರಣ ಆರಂಭವಾಗಲಿದೆ. ಚಿತ್ರದ ಕುರಿತಾಗಿ ಅಭಿಮಾನಿಗಳಲ್ಲಿ ಕುತೂಹಲ ಮೂಡಿದೆ.

ಇನ್ನು ದರ್ಶನ್ ಅವರು ಸಂಕ್ರಾಂತಿ ಸ್ಪೆಷಲ್ ಆಗಿ ಲ್ಯಾಂಬೋರ್ಗಿನಿ ಕಾರು ಖರೀದಿಸಿದ್ದಾರೆ. ದರ್ಶನ್ ಬಳಿ ಹಲವು ಐಷಾರಾಮಿ ಕಾರುಗಳಿದ್ದು, ಅವುಗಳ ಸಾಲಿಗೆ ಮತ್ತೊಂದು ಸೇರ್ಪಡೆಯಾಗಿದೆ.

ಅಭಿಮಾನಿಗಳಿಗೆ ಸಂಕ್ರಾಂತಿ ಶುಭಾಶಯ ಹೇಳಿರುವ ದರ್ಶನ್, ಕಬ್ಬಿನ ಸಿಹಿಯನ್ನು ಹೀರುತ್ತಾ, ಎಳ್ಳು ಬೆಲ್ಲ ಸವಿಯುತ್ತಾ ಸವಿ ಮಾತುಗಳಿಂದ ವರ್ಷದ ಮೊದಲನೇ ಹಬ್ಬವನ್ನು ಸ್ವಾಗತಿಸೋಣ. ಎಲ್ಲರಿಗೂ ಈ ನಿಮ್ಮ ಪ್ರೀತಿಯ ದಾಸನಿಂದ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...