alex Certify
ಕನ್ನಡ ದುನಿಯಾ       Mobile App
       

Kannada Duniya

‘ಸತ್ಯದೇವ್ IPS’ ಚಿತ್ರ ಬಿಡುಗಡೆಗೆ ಹಿನ್ನಡೆ

sathyadev-ipsತಮಿಳಿನ ‘ಎನ್ನೈ ಅರಿಂದಾಳ್’ ಚಿತ್ರವನ್ನು ಕನ್ನಡಕ್ಕೆ ಡಬ್ ಮಾಡಿ ಇಂದು ಬಿಡುಗಡೆ ಮಾಡುವ ಪ್ರಯತ್ನಕ್ಕೆ ವಿವಿಧ ಕನ್ನಡ ಪರ ಸಂಘಟನೆಗಳ ಹೋರಾಟದಿಂದಾಗಿ ಹಿನ್ನಡೆಯಾಗಿದೆ.

‘ಸತ್ಯದೇವ್ ಐಪಿಎಸ್’ ಹೆಸರಿನಲ್ಲಿ ಈ ಚಿತ್ರ ಇಂದು ರಾಜ್ಯಾದ್ಯಂತ ಬಿಡುಗಡೆಯಾಗಬೇಕಿತ್ತು. ಬಿಡುಗಡೆಗೊಳ್ಳಬೇಕಿದ್ದ ಚಿತ್ರಮಂದಿರಗಳ ಎದುರು ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಬಳಿಕ ‘ಸತ್ಯದೇವ್ ಐಪಿಎಸ್’ ಪ್ರದರ್ಶನ ರದ್ದುಗೊಳಿಸಿ ಇದರ ಬದಲಿಗೆ ಕನ್ನಡ ಚಿತ್ರ ಪ್ರದರ್ಶಿಸಲಾಗುತ್ತಿದೆ.

ಬೆಂಗಳೂರಿನ ಚಲನಚಿತ್ರ ವಾಣಿಜ್ಯ ಮಂಡಳಿ ಎದುರು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರೆ, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಡಬ್ಬಿಂಗ್ ಚಿತ್ರ ವಿರೋಧಿಸಿ ಸ್ನೇಕ್ ಶ್ಯಾಮ್ ಪ್ರತಿಭಟನೆ ಮಾಡಿದ್ದಾರೆ. ಹುಬ್ಬಳ್ಳಿ ಹಾಗೂ ಚಿತ್ರದುರ್ಗದಲ್ಲೂ ‘ಸತ್ಯದೇವ್ ಐಪಿಎಸ್’ ತೆರೆ ಕಾಣಬೇಕಿದ್ದ ಚಿತ್ರಮಂದಿರಗಳ ಮುಂದೆ ಪ್ರತಿಭಟನೆ ನಡೆಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...