alex Certify
ಕನ್ನಡ ದುನಿಯಾ       Mobile App
       

Kannada Duniya

‘ಬಾಹುಬಲಿ’ಗೆ ಸಾಥ್ ಕೊಡಲ್ಲ ಶಾರುಖ್

saruk

ಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ಅವರ ದೃಶ್ಯಕಾವ್ಯ ‘ಬಾಹುಬಲಿ’ 2 ನೇ ಭಾಗದಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಕಾಣಿಸಿಕೊಳ್ಳಲಿದ್ದಾರೆ ಎಂದು ಗಾಳಿ ಸುದ್ದಿ ಹರಿದಾಡುತ್ತಿತ್ತು.

‘ಬಾಹುಬಲಿ-2’ ರಲ್ಲಿ ಶಾರುಖ್ ಖಾನ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದೆಲ್ಲಾ ಹೇಳಲಾಗಿತ್ತು.

ಈ ಕುರಿತಂತೆ ಕಳೆದೆರಡು ದಿನಗಳಿಂದ ಹರಿದಾಡುತ್ತಿದ್ದ ವದಂತಿಗೆ ತೆರೆ ಬಿದ್ದಿದೆ. ಚಿತ್ರತಂಡದ ವತಿಯಿಂದ ಮಾಹಿತಿ ನೀಡಲಾಗಿದ್ದು, ತಮ್ಮ ಚಿತ್ರದಲ್ಲಿ ಶಾರುಖ್ ಖಾನ್ ನಟಿಸುತ್ತಿಲ್ಲ ಎಂದು ಸ್ಪಷ್ಟನೆ ನೀಡಲಾಗಿದೆ.

‘ಬಾಹುಬಲಿ’ ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಿದ್ದು, ಶಾರುಖ್ ಖಾನ್ ತಮ್ಮ ಸಿನಿಮಾದಲ್ಲಿ ನಟಿಸಲಿ ಎಂಬುದು ಇಷ್ಟದ ವಿಚಾರವಾದರೂ ಅವರು ‘ಬಾಹುಬಲಿ-2’ ರಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಈ ಕುರಿತಾಗಿ ಹರಿದಾಡುತ್ತಿರುವ ಸುದ್ದಿ ಸುಳ್ಳು ಎಂದು ತಿಳಿಸಲಾಗಿದೆ.

ಭಾರೀ ನಿರೀಕ್ಷೆಯ ‘ಬಾಹುಬಲಿ-2’ ಏಪ್ರಿಲ್ ನಲ್ಲಿ ತೆರೆ ಕಾಣಲಿದೆ. ಪ್ರಭಾಸ್, ರಾಣಾ ದಗ್ಗುಬಾಟಿ, ಅನುಷ್ಕಾ ಶೆಟ್ಟಿ, ರಮ್ಯಕೃಷ್ಣ ಮೊದಲಾದವರು ಅಭಿನಯಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...