alex Certify
ಕನ್ನಡ ದುನಿಯಾ       Mobile App
       

Kannada Duniya

ಶಾರುಖ್ ಖಾನ್ ಕಾರಿನ ಮೇಲೆ ಕಲ್ಲು ತೂರಾಟ

raees-first-poster

ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಸದಾ ಸುದ್ದಿಯಲ್ಲಿರುವ ನಟ. ಇದೀಗ ಅವರ ಕಾರಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆ ಗುಜರಾತ್ ನಲ್ಲಿ ನಡೆದಿದೆ. ಈ ಕಾರಣಕ್ಕೆ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಗುಜರಾತ್ ನಲ್ಲಿ ಶಾರುಖ್ ಅಭಿನಯದ ‘ರಾಯಿಸ್’ ಶೂಟಿಂಗ್ ನಡೆಯುತ್ತಿದೆ.

ಗುಜರಾತ್ ನಲ್ಲಿ ವಿವಿಧೆಡೆ ನಡೆಯುತ್ತಿರುವ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದು, ಇಂದು ಅಹಮದಾಬಾದ್ ನಲ್ಲಿ ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಈ ಸಂದರ್ಭದಲ್ಲಿ ಶಾರುಖ್ ಖಾನ್ ಇರಲಿಲ್ಲ. ಅವರ ಕಾರು ಅಹಮದಾಬಾದ್ ನಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದು, ಕಾರ್ ಹಾನಿಗೆ ಒಳಗಾಗಿದೆ. ಶಾರುಖ್ ಕಾರಿನಲ್ಲಿದ್ದರೆ ಅವರಿಗೂ ತೊಂದರೆಯಾಗುವ ಸಾಧ್ಯತೆ ಇತ್ತು ಎನ್ನಲಾಗಿದೆ. ಶಾರುಖ್ ಸೆಟ್ ನಲ್ಲಿದ್ದ ಕಾರಣ ಪಾರಾಗಿದ್ದಾರೆ.

ಗುಜರಾತ್ ನಲ್ಲಿ ಕೆಲವು ದಿನಗಳಿಂದ ‘ರಾಯಿಸ್’ ಚಿತ್ರೀಕರಣ ನಡೆಯುತ್ತಿದ್ದು, ಇತ್ತೀಚೆಗೆ ಕೆಲವು ಸಂಘಟನೆಗಳ ಕಾರ್ಯಕರ್ತರು ಅದರ ವಿರುದ್ಧ ಪ್ರತಿಭಟನೆ ನಡೆಸಿದ್ದರು. ನಂತರ ಪರಿಸ್ಥಿತಿ ತಿಳಿಯಾಗಿ ಶೂಟಿಂಗ್ ಮುಂದುವರೆಸಲಾಗಿತ್ತು. ಇದೀಗ ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...