alex Certify
ಕನ್ನಡ ದುನಿಯಾ       Mobile App
       

Kannada Duniya

ಜಾಲತಾಣದಲ್ಲಿ ವೈರಲ್ ಆಯ್ತು ಶಾರುಖ್ ಪುತ್ರಿಯ ಹಾಟ್ ಫೋಟೋ

suhana-khan-shahrukh-khan-daughter

ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಸಿನೆಮಾ ರಂಗಕ್ಕೆ ಎಂಟ್ರಿ ಕೊಡಲು ಪೂರ್ವತಯಾರಿ ನಡೆಸಿದ್ದಾರೆ. ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲು ಬೇಕಿರುವ ತಯಾರಿಯನ್ನು ಆರ್ಯನ್ ಮಾಡಿಕೊಳ್ಳುತ್ತಿದ್ದು, ಕರಣ್ ಜೋಹರ್ ಮೊದಲ ಚಿತ್ರ ನಿರ್ದೇಶನ ಮಾಡಲಿದ್ದಾರೆ ಎನ್ನಲಾಗಿದೆ.

ಆರ್ಯನ್ ಚಿತ್ರರಂಗಕ್ಕೆ ಎಂಟ್ರಿ ಕೊಡಲು ತಯಾರಿ ನಡೆಸಿರುವುದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗಿತ್ತು. ಈಗ ಶಾರುಖ್ ಪುತ್ರಿಯ ಸರದಿ. ಶಾರುಖ್ ಖಾನ್ ಪುತ್ರಿ ಸುಹಾನ ಖಾನ್, ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಬೋಲ್ಡ್, ಹಾಟ್ ಫೋಟೋಗಳನ್ನು ಅಪ್ ಲೋಡ್ ಮಾಡಿದ್ದು, ಭಾರೀ ಸಂಚಲನ ಮೂಡಿಸಿದೆ. ಕೆಲ ದಿನಗಳ ಹಿಂದಷ್ಟೇ ಬಾಲಿವುಡ್ ಸ್ಟಾರ್ ಅಮಿತಾಬ್ ಬಚ್ಚನ್ ಮೊಮ್ಮಗಳು ನವ್ಯಾ ನವೇಲಿ ನಂದಾ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಅದಕ್ಕಿಂತ ಹಿಂದೆ ನವ್ಯಾ ಹಾಗೂ ಆರ್ಯನ್ ಜೊತೆಯಾಗಿ ಕಾಣಿಸಿಕೊಂಡಿದ್ದ ಫೋಟೋ ಭಾರೀ ಚರ್ಚೆಗೆ ಒಳಪಟ್ಟಿತ್ತು. ಇದೀಗ ಶಾರುಖ್ ಪುತ್ರಿ ಸುಹಾನಾ ಖಾನ್ ಪಾರ್ಟಿಯೊಂದರಲ್ಲಿ ಭಾಗವಹಿಸಿದ್ದ ತನ್ನ ಪೋಟೋಗಳನ್ನು ಹರಿಯಬಿಟ್ಟಿದ್ದು, ಅಪಾರ ಸಂಖ್ಯೆಯ ಜನ ವೀಕ್ಷಿಸಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...