alex Certify
ಕನ್ನಡ ದುನಿಯಾ       Mobile App
       

Kannada Duniya

ಕನ್ನಡ ಕಿರುತೆರೆಯಲ್ಲಿ ಶಿಲ್ಪಾಶೆಟ್ಟಿ ಮಿಂಚು

shilpashetty-dec6

ಬಾಲಿವುಡ್ ಬೆಡಗಿ ಶಿಲ್ಪಾಶೆಟ್ಟಿ ಕನ್ನಡದ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಕ್ರೇಜಿ ಸ್ಟಾರ್ ರವಿಚಂದ್ರನ್ ಅಭಿನಯದ ‘ಪ್ರೀತ್ಸೋದ್ ತಪ್ಪಾ?’, ‘ಒಂದಾಗೋಣಾ ಬಾ’ ಹಾಗೂ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ‘ಆಟೋ ಶಂಕರ್’ ಸಿನಿಮಾದಲ್ಲಿ ಶಿಲ್ಪಾ ಶೆಟ್ಟಿ ನಟಿಸಿದ್ದಾರೆ.

ಅದಾದ ಬಳಿಕ ಏಕೋ ಅವರು ಕನ್ನಡ ಸಿನಿಮಾಗಳಲ್ಲಿ ಕಾಣಿಸಿಕೊಳ್ಳಲಿಲ್ಲ. ಇದೀಗ ಕಿರುತೆರೆಯಲ್ಲಿ ಅವರು ಮಿಂಚು ಹರಿಸಲಿದ್ದಾರೆ. ಶಿಲ್ಪಾಶೆಟ್ಟಿ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುವ ‘ಡ್ಯಾನ್ಸ್ ಡ್ಯಾನ್ಸ್’ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಕಾಣಿಸಿಕೊಂಡಿದ್ದಾರೆ. ಕ್ರೇಜಿಸ್ಟಾರ್ ರವಿಚಂದ್ರನ್, ನಟಿ ಖುಷ್ಬೂ ಸೇರಿದಂತೆ ಹಲವಾರು ಖ್ಯಾತ ಕಲಾವಿದರು ಈ ಪ್ರೋಗ್ರಾಂನಲ್ಲಿ ಪಾಲ್ಗೊಂಡಿದ್ದಾರೆ. ಇದೀಗ ಶಿಲ್ಪಾಶೆಟ್ಟಿ ಅವರು ‘ಡ್ಯಾನ್ಸ್ ಡ್ಯಾನ್ಸ್’ ಪ್ರೋಗ್ರಾಂನಲ್ಲಿ ಭಾಗವಹಿಸುವ ಮೂಲಕ ಕನ್ನಡ ಕಿರುತೆರೆಯಲ್ಲಿಯೂ ಕಾಣಿಸಿಕೊಂಡಿದ್ದಾರೆ.

ಬೆಂಗಳೂರಿನ ರಾಕ್ ಲೈನ್ ಸ್ಟುಡಿಯೋದಲ್ಲಿ ನಡೆದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದ ಶಿಲ್ಪಾಶೆಟ್ಟಿ ಒಂದೆರಡು ಹಾಡಿಗೆ ಸ್ಟೆಪ್ ಹಾಕಿದ್ದಾರೆ. ಅಲ್ಲದೇ ಬೆಲ್ಲಿ ಡ್ಯಾನ್ಸ್ ಕೂಡ ಮಾಡಿದ್ದಾರೆ. ಅಂದಹಾಗೇ ಈ ಕಾರ್ಯಕ್ರಮ ಫೆಬ್ರವರಿ 15ರಂದು ಸಂಜೆ 7.30ಕ್ಕೆ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...