alex Certify
ಕನ್ನಡ ದುನಿಯಾ       Mobile App
       

Kannada Duniya

ನಟನ ವಿರುದ್ಧ ದಾಖಲಾಯ್ತು ಎಫ್.ಐ.ಆರ್.

shivaay-poster

ನವದೆಹಲಿ: ಕೆಲವು ಸಿನಿಮಾಗಳು ಬಿಡುಗಡೆಗೂ ಮೊದಲೇ ವಿವಾದಕ್ಕೆ ಕಾರಣವಾಗುತ್ತವೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ದೃಶ್ಯಗಳಿವೆ ಎಂಬ ಕಾರಣಕ್ಕೆ ಅದೆಷ್ಟೋ ಸಿನಿಮಾಗಳ ಬಿಡುಗಡೆಗೆ ವಿರೋಧ ಕೂಡ ವ್ಯಕ್ತವಾದ ಘಟನೆಗಳು ನಡೆದಿವೆ.

ಬಾಲಿವುಡ್ ನಟ ಅಜಯ್ ದೇವಗನ್ ವಿರುದ್ಧ, ನವದೆಹಲಿಯ ತಿಲಕ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಜಯ್ ದೇವಗನ್ ಅವರು ನಟಿಸಿರುವ ‘ಶಿವಾಯ್’ ಸಿನಿಮಾದ ಪೋಸ್ಟರ್ ನಲ್ಲಿ ಆಕ್ಷೇಪಾರ್ಹ ದೃಶ್ಯಗಳಿವೆ. ಇದರಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುತ್ತದೆ ಎಂದು ವಕೀಲರೊಬ್ಬರು ದೂರು ನೀಡಿದ್ದಾರೆ. ಪೋಸ್ಟರ್ ನಲ್ಲಿ ಶೂ ಧರಿಸಿ ಶಿವನ ವಿಗ್ರಹದ ಮೇಲೆ ಅಜಯ್ ದೇವಗನ್ ನಿಂತಿದ್ದಾರೆ ಎನ್ನಲಾಗಿದೆ

ಆದರೆ, ಅದರಲ್ಲಿ ಅಜಯ್ ದೇವಗನ್ ಹಗ್ಗ ಹಿಡಿದು ತೂರಾಡುತ್ತಿದ್ದಾರೆ. ಅವರು ಶೂ ಧರಿಸಿ ವಿಗ್ರಹದ ಮೇಲೆ ನಿಂತಿಲ್ಲ. ಈ ಆರೋಪಗಳಲ್ಲಿ ಹುರುಳಿಲ್ಲ ಎಂದು ಚಿತ್ರತಂಡದವರು ಹೇಳಿದ್ದಾರೆ. ಮುಂದೇನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...