alex Certify
ಕನ್ನಡ ದುನಿಯಾ       Mobile App
       

Kannada Duniya

‘ಟಗರು’ ನಿರ್ದೇಶಕರ ವಿರುದ್ಧ ಮತ್ತಷ್ಟು ಹೆಚ್ಚಾಯ್ತು ಆಕ್ರೋಶ

ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅಭಿನಯದ ‘ಟಗರು’ ಬಿಡುಗಡೆಯಾದಲ್ಲೆಲ್ಲಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಪ್ರೇಕ್ಷಕರು ‘ಟಗರು’ ವೀಕ್ಷಣೆಗೆ ಮುಗಿ ಬಿದ್ದಿದ್ದು, ಎಲ್ಲಾ ಕಡೆಗಳಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇದೇ ವೇಳೆ ಚಿತ್ರದಲ್ಲಿ ಶಿವರಾಜ್ ಕುಮಾರ್ ಕುರಿತಾಗಿ ಖಳನಾಯಕ ಪಾತ್ರಧಾರಿಗಳು ಆಡಿರುವ ಮಾತಿನ ಬಗ್ಗೆ ಆಕ್ರೋಶ ವ್ಯಕ್ತವಾಗ್ತಿದೆ. ಇಂತಹ ಮಾತುಗಳಿಗೆ ಕಡಿವಾಣ ಹಾಕಬೇಕಿತ್ತು ಎಂದು ಚಿತ್ರ ಬಿಡುಗಡೆ ದಿನವೇ ಶಿವಣ್ಣ ಅಭಿಮಾನಿಗಳು ಹೇಳಿದ್ದಾರೆ.

ಚಿತ್ರದಲ್ಲಿ ಖಳನಾಯಕರಾದ ಧನಂಜಯ, ವಸಿಷ್ಠ ಸಿಂಹ ಅವರು ಶಿವಣ್ಣರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದು, ಅಖಿಲ ಕರ್ನಾಟಕ ಡಾ. ರಾಜ್ ಕುಮಾರ್ ಸೇನಾ ಸಮಿತಿ ಪ್ರಮುಖರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಚಿತ್ರದ ನಿರ್ದೇಶಕ ಸೂರಿ ಕೂಡಲೇ ಕ್ಷಮೆ ಕೇಳಬೇಕೆಂದು ಒತ್ತಾಯಿಸಿದ್ದಾರೆ. ಅವರು ಕ್ಷಮೆ ಕೇಳದಿದ್ದರೆ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಬಿಡುಗಡೆ ದಿನವೇ ಅಭಿಮಾನಿಗಳು ಆಕ್ಷೇಪಿಸಿದ್ದ ಸಂದರ್ಭದಲ್ಲಿ ಶಿವಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ಚಿತ್ರದಲ್ಲಿ ನಾಯಕ ಬೈದಾಡಿದಾಗ ಶಿಳ್ಳೆ ಚಪ್ಪಾಳೆ ಹೊಡೆಯುವುದಿಲ್ಲವೇ? ಇದು ಅದೇ ರೀತಿ. ಸಿನಿಮಾದಲ್ಲಿ ವಿಲನ್ ಬೈದ್ರೇ ತಪ್ಪೇನು ಎಂದ ಪ್ರಶ್ನಿಸಿದ್ದು, ಚಿತ್ರದಲ್ಲಿ ಯಾವುದೇ ಸಂಭಾಷಣೆಗೆ ಕತ್ತರಿ ಹಾಕದಂತೆ ಹೇಳಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...