alex Certify
ಕನ್ನಡ ದುನಿಯಾ       Mobile App
       

Kannada Duniya

ಬರ್ತಡೇ ಸಂಭ್ರಮದಲ್ಲಿ ಸೆಂಚುರಿ ಸ್ಟಾರ್ ಶಿವಣ್ಣ

shivarajkumarbirthday19

ಸ್ಯಾಂಡಲ್ ವುಡ್ ಹ್ಯಾಟ್ರಿಕ್ ಹೀರೋ, ಸೆಂಚುರಿ ಸ್ಟಾರ್ ಡಾ.ಶಿವರಾಜ್ ಕುಮಾರ್, 54 ನೇ ಹುಟ್ಟುಹಬ್ಬವನ್ನು ಇಂದು ಅಭಿಮಾನಿಗಳ ಸಮ್ಮುಖದಲ್ಲಿ ವಿಜೃಂಭಣೆಯಿಂದ ಆಚರಿಸಿದರು. ಬೆಂಗಳೂರು ನಾಗವಾರದಲ್ಲಿರುವ ಶಿವರಾಜ್ ಕುಮಾರ್ ನಿವಾಸದಲ್ಲಿ ರಾತ್ರಿಯಿಂದಲೇ ಅಭಿಮಾನಿಗಳ ದಂಡು ನೆರೆದಿತ್ತು.

ಪತ್ನಿ ಗೀತಾ ಶಿವರಾಜ್ ಕುಮಾರ್, ಪುತ್ರಿಯರಾದ ಅನುಪಮಾ, ನಿವೇದಿತಾ ಹಾಗೂ ಅಪಾರ ಅಭಿಮಾನಿಗಳ ಸಮ್ಮುಖದಲ್ಲಿ ಕೇಕ್ ಕತ್ತರಿಸಿದ ಶಿವಣ್ಣ ಖುಷಿ ಹಂಚಿಕೊಂಡರು. ರಾಜ್ಯದ ವಿವಿಧ ಕಡೆಗಳಿಂದ ಆಗಮಿಸಿದ್ದ ಶಿವರಾಜ್ ಕುಮಾರ್ ಅಭಿಮಾನಿಗಳು ಶುಭ ಕೋರಿದರು. ತಾವು ತಂದಿದ್ದ ಕೇಕ್ ಅನ್ನು ಶಿವಣ್ಣನವರಿಂದ ಕತ್ತರಿಸಿದರಲ್ಲದೇ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಸೆಂಚುರಿ ಸ್ಟಾರ್ ಶಿವಣ್ಣ ಎಂದು ಘೋಷಣೆ ಕೂಗಿ ಸಂಭ್ರಮ ವ್ಯಕ್ತಪಡಿಸಿದರು.

ಶಿವರಾಜ್ ಕುಮಾರ್ ಅಭಿನಯದ ಹೊಸ ಚಿತ್ರ ‘ಶ್ರೀಕಂಠ’ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಶ್ರೀನಗರ ಕಿಟ್ಟಿ, ನಿರ್ದೇಶಕ ಸೂರಿ, ವಿನಯ್ ರಾಜ್ ಕುಮಾರ್ ಮೊದಲಾದವರು ಶುಭಕೋರಿದ್ದಾರೆ. ರಾತ್ರಿಯಿಂದಲೇ ಶಿವಣ್ಣ ನಿವಾಸದಲ್ಲಿ ಸಂಭ್ರಮ ಮನೆ ಮಾಡಿದ್ದು, ಅಪಾರ ಸಂಖ್ಯೆಯ ಅಭಿಮಾನಿಗಳು ಶುಭಕೋರಿದ್ದಾರೆ.

30 ವರ್ಷಗಳಿಂದ 110 ಚಿತ್ರಗಳಲ್ಲಿ ಅಭಿನಯಿಸಿರುವ ಶಿವಣ್ಣ 2020 ರವರೆಗೂ ಬ್ಯುಸಿಯಾಗಿದ್ದಾರೆ. ವಿಭಿನ್ನ ಪಾತ್ರಗಳ ಮೂಲಕ ಅಭಿಮಾನಿಗಳ ಮನಸೂರೆಗೊಂಡಿರುವ ಅವರು ‘ಲೀಡರ್’, ‘ಖದರ್’, ‘ಬಂಗಾರು’ ಮೊದಲಾದ ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...