alex Certify
ಕನ್ನಡ ದುನಿಯಾ       Mobile App
       

Kannada Duniya

ಇಲ್ಲಿದೆ ಶಿವಣ್ಣ, ಸುದೀಪ್ ಸಿನಿಮಾ ಕುರಿತಾದ ಸುದ್ದಿ

vilan-d

ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷೆಯ ಚಿತ್ರ ‘ದಿ ವಿಲನ್’ ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ.

ಚಿತ್ರದ ಮತ್ತೊಂದು ಹಂತದ ಚಿತ್ರೀಕರಣಕ್ಕೆ ಚಿತ್ರತಂಡ ಲಂಡನ್ ಗೆ ಪ್ರಯಾಣ ಬೆಳೆಸಲಿದೆ. ಸುದೀಪ್, ಶಿವಣ್ಣ ಅಭಿನಯದ ದೃಶ್ಯಗಳ ಚಿತ್ರೀಕರಣ ಲಂಡನ್ ನಲ್ಲಿ ನಡೆಯಲಿದೆ. ಅಲ್ಲದೇ, ಚಿತ್ರದ ನಾಯಕಿ ಆಮಿ ಜಾಕ್ಸನ್ ಕೂಡ ಚಿತ್ರ ತಂಡವನ್ನು ಸೇರಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಲಂಡನ್ ಬಳಿಕ ಆಸ್ಟ್ರೇಲಿಯಾ ಹಾಗೂ ಬ್ಯಾಂಕಾಕ್ ನಲ್ಲಿ ಚಿತ್ರೀಕರಣಕ್ಕೆ ಪ್ಲಾನ್ ಮಾಡಲಾಗಿದೆ. ‘ಜೋಗಿ’ ಪ್ರೇಮ್ ನಿರ್ದೇಶಿಸುತ್ತಿರುವ ಚಿತ್ರವನ್ನು ಸಿ.ಆರ್. ಮನೋಹರ್ ನಿರ್ಮಾಣ ಮಾಡಿದ್ದಾರೆ.

ಬಿಗ್ ಬಜೆಟ್ ಸಿನಿಮಾ ಇದಾಗಿದ್ದು, ಈಗಾಗಲೇ ಶಿವಮೊಗ್ಗ, ಬೆಳಗಾವಿ ಮೊದಲಾದ ಕಡೆಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ಕೂಡ ಚಿತ್ರದಲ್ಲಿ ಅಭಿನಯಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...