alex Certify
ಕನ್ನಡ ದುನಿಯಾ       Mobile App
       

Kannada Duniya

ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೊಂದು ಖುಷಿ ಸುದ್ದಿ

ರಾಕಿಂಗ್ ಸ್ಟಾರ್ ಯಶ್ ನಾಯಕ ನಟನಾಗಿ ನಟಿಸುತ್ತಿರುವ ಬಹು ನಿರೀಕ್ಷಿತ ಕೆ.ಜಿ.ಎಫ್. ಚಿತ್ರದ ಚಿತ್ರೀಕರಣ ಮುಗಿದಿದೆ. ಸುಮಾರು 17 ತಿಂಗಳುಗಳಿಂದ ಚಿತ್ರದ ಚಿತ್ರಿಕರಣ ನಡೆಯುತ್ತಿತ್ತು. ಚಿತ್ರೀಕರಣ ಮುಗಿಯುತ್ತಿದ್ದಂತೆ ಚಿತ್ರ ತಂಡ ಕೇಕ್ ಕಟ್ ಮಾಡಿ ಸಂಭ್ರಮಿಸಿದೆ.

ಚಿತ್ರದ ಚಿತ್ರೀಕರಣಕ್ಕಾಗಿ ದುಡಿದ ಎಲ್ಲ ಸಿಬ್ಬಂದಿಗಳಿಗೂ ಭೋಜನ ಕೂಟ ಏರ್ಪಡಿಸಲಾಗಿತ್ತು. ಚಿತ್ರಕ್ಕಾಗಿ ಹಗಲಿರುಳು ದುಡಿದ ತಂಡ ಚಿತ್ರದ ಯಶಸ್ಸಿಗಾಗಿ ಟೊಂಕ ಕಟ್ಟಿ ನಿಂತಿದೆ.

ಅಂದಹಾಗೆ ಈ ಚಿತ್ರದ ಒಂದು ಹಾಡಿನಲ್ಲಿ ಬಹುಭಾಷಾ ನಟಿ ತಮನ್ನಾ ಹೆಜ್ಜೆ ಹಾಕಿದ್ದಾರೆ. ಈ ಹಾಡಿನ ಶೂಟಿಂಗ್ ಮುಗಿಯುತ್ತಿದ್ದಂತೆ ಚಿತ್ರದ ಸಂಪೂರ್ಣ ಶೂಟಿಂಗ್ ಮುಗಿದಿದೆ. ಕಳೆದ ಎರಡು ವರ್ಷಗಳಿಂದ ಕೆ.ಜಿ.ಎಫ್. ಸಿನಿಮಾದ ಕೆಲಸಗಳು ನಡೆಯುತ್ತಿತ್ತು. ನಿರ್ದೇಶಕ ಪ್ರಶಾಂತ್ ನೀಲ್ ಈ ಸಿನಿಮಾಗಾಗಿ ತುಂಬಾನೇ ಶ್ರಮ ಪಡುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...