alex Certify
ಕನ್ನಡ ದುನಿಯಾ       Mobile App
       

Kannada Duniya

ಕಿರುತೆರೆಯ ಖ್ಯಾತ ನಟ ಹರೀಶ್ ಇನ್ನಿಲ್ಲ

harish actorಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಅರಗಿಣಿ’ ಧಾರಾವಾಹಿಯಲ್ಲಿ ನಾಯಕ ನಟನಾಗಿದ್ದ ಚಿತ್ರದುರ್ಗ ಮೂಲದ ಹರೀಶ್ ಇಂದು ಆಕಾಲಿಕ ಮರಣವನ್ನಪ್ಪಿದ್ದಾರೆ.

‘ಅರಗಿಣಿ’ ಧಾರಾವಾಹಿಯಲ್ಲಿ ಸಿದ್ಧಾರ್ಥ ಪಾಟೀಲ್ ಪಾತ್ರದಲ್ಲಿ ನಟಿಸಿದ್ದ ಹರೀಶ್, ತಮ್ಮ ಅಭಿನಯದಿಂದ ಕನ್ನಡಿಗರ ಮನ ಗೆದ್ದಿದ್ದರು. ‘ಅರಗಿಣಿ’ ನಂತರ ‘ಓಂ ಶಕ್ತಿ ಓಂ ಶಾಂತಿ’ ಯಲ್ಲಿ ಹರೀಶ್ ನಟಿಸುತ್ತಿದ್ದರು.

ಡೆಂಗ್ಯೂ ಮತ್ತು ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ಹರೀಶ್, ಕಳೆದ ಕೆಲ ದಿನಗಳಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಅವರ ಪಾರ್ಥಿವ ಶರೀರವನ್ನು ಹುಟ್ಟೂರಾದ ಚಿತ್ರದುರ್ಗಕ್ಕೆ ಕೊಂಡೊಯ್ಯಲಾಗಿದೆ. ಕಿರಿ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಹರೀಶ್ ರ ಅಕಾಲಿಕ ಸಾವಿಗೆ ಕಿರು ತೆರೆ ಕಲಾವಿದರು ಕಂಬನಿ ಮಿಡಿದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...