alex Certify
ಕನ್ನಡ ದುನಿಯಾ       Mobile App
       

Kannada Duniya

ಬಹಿರಂಗವಾಯ್ತು ನಟಿ ಶ್ರೀದೇವಿ ಅಂತ್ಯಸಂಸ್ಕಾರದ ವೇಳೆ ಸರ್ಕಾರಿ ಗೌರವ ನೀಡಿದ ರಹಸ್ಯ

ಸಂಬಂಧಿಯ ವಿವಾಹ ಸಮಾರಂಭಕ್ಕಾಗಿ ದುಬೈಗೆ ತೆರಳಿದ್ದ ಖ್ಯಾತ ಬಾಲಿವುಡ್ ನಟಿ ಶ್ರೀದೇವಿ ಫೆಬ್ರವರಿ 24 ರಂದು ತಾವು ತಂಗಿದ್ದ ಹೋಟೆಲ್ ನ ಬಾತ್ ಟಬ್ ನಲ್ಲಿ ಬಿದ್ದು ಸಾವನ್ನಪ್ಪಿದ್ದರು. ಅವರ ಅಂತ್ಯಸಂಸ್ಕಾರ ಫೆಬ್ರವರಿ 28 ರಂದು ಮುಂಬೈನಲ್ಲಿ ನಡೆದಿದ್ದು, ಈ ಸಂದರ್ಭದಲ್ಲಿ ಸರ್ಕಾರಿ ಗೌರವ ಸಲ್ಲಿಸಲಾಗಿತ್ತು.

ಬಾಲ್ಯದಲ್ಲೇ ಚಿತ್ರರಂಗಕ್ಕೆ ಕಾಲಿಟ್ಟಿದ್ದ ಶ್ರೀದೇವಿಯವರ ಸುದೀರ್ಘ ಕಲಾಸೇವೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದ್ದು, ಈ ಹಿನ್ನಲೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಶ್ರೀದೇವಿಯವರ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ ಎಂದು ಭಾವಿಸಲಾಗಿತ್ತು.

ಆದರೆ ಸಾಮಾಜಿಕ ಕಾರ್ಯಕರ್ತ ಅನಿಲ್ ಗಲಗಲಿ ಎಂಬವರು ಮಾಹಿತಿ ಹಕ್ಕು ಕಾಯ್ದೆಯಡಿ ಈ ಕುರಿತು ವಿವರ ಕೋರಿ ಮಹಾರಾಷ್ಟ್ರ ಸರ್ಕಾರಕ್ಕೆ ಸಲ್ಲಿಸಿದ್ದ ಅರ್ಜಿಗೆ ಈಗ ಉತ್ತರ ಸಿಕ್ಕಿದ್ದು, ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಮ್ಮ ವಿವೇಚನಾ ಅಧಿಕಾರನ್ನು ಬಳಸಿ ಸಕಲ ಸರ್ಕಾರಿ ಗೌರವಗಳೊಂದಿಗೆ ಶ್ರೀದೇವಿಯವರ ಅಂತ್ಯಸಂಸ್ಕಾರ ನೆರವೇರಿಸಲು ಸೂಚಿಸಿದ್ದರೆಂಬ ಅಂಶ ಬಹಿರಂಗವಾಗಿದೆ. ಮುಖ್ಯಮಂತ್ರಿಗಳ ಆದೇಶದಂತೆ ಸರ್ಕಾರಿ ಗೌರವದ ರೀತ್ಯಾ ಶ್ರೀದೇವಿಯವರ ಮೃತ ದೇಹವನ್ನು ತ್ರಿವರ್ಣ ಧ್ವಜದಲ್ಲಿ ಸುತ್ತಲಾಗಿತ್ತಲ್ಲದೇ ಅಂತ್ಯಸಂಸ್ಕಾರಕ್ಕೂ ಮುನ್ನ ಕುಶಾಲ ತೋಪು ಸಿಡಿಸಲಾಗಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...