alex Certify
ಕನ್ನಡ ದುನಿಯಾ       Mobile App
       

Kannada Duniya

ಶ್ರೀದೇವಿ ಅಂತಿಮ ದರ್ಶನಕ್ಕೆ ಹರಿದುಬರುತ್ತಿದೆ ಜನಸಾಗರ

ಶನಿವಾರದಂದು ದುಬೈನಲ್ಲಿ ನಿಧನರಾದ ಖ್ಯಾತ ಬಾಲಿವುಡ್ ನಟಿ ಶ್ರೀದೇವಿಯವರ ಪಾರ್ಥಿವ ಶರೀರವನ್ನು ಕಳೆದ ರಾತ್ರಿ ಮುಂಬೈಗೆ ತರಲಾಗಿದ್ದು, ಅಂಧೇರಿಯಲ್ಲಿರುವ ಅವರ ನಿವಾಸದಲ್ಲಿ ಇರಿಸಲಾಗಿದೆ. ರಾತ್ರಿಯೇ ಹಲವು ಬಾಲಿವುಡ್ ಗಣ್ಯರು ಶ್ರೀದೇವಿಯವರ ಅಂತಿಮ ದರ್ಶನ ಪಡೆದಿದ್ದಾರೆ.

ದುಬೈನಲ್ಲಿ ಕಾನೂನು ಪ್ರಕ್ರಿಯೆಗಳು ಮುಗಿದ ಬಳಿಕ ಖ್ಯಾತ ಉದ್ಯಮಿ ಅನಿಲ್ ಅಂಬಾನಿಯವರಿಗೆ ಸೇರಿದ ವಿಶೇಷ ವಿಮಾನದಲ್ಲಿ ಪಾರ್ಥಿವ ಶರೀರವನ್ನು ತರಲಾಗಿದ್ದು, ಶ್ರೀದೇವಿಯವರ ಪತಿ ಬೋನಿ ಕಪೂರ್, ಮಲಮಗ ಅರ್ಜುನ್ ಕಪೂರ್ ಹಾಗೂ ಕೆಲ ಕುಟುಂಬ ಸದಸ್ಯರು ಇದೇ ವಿಮಾನದಲ್ಲಿ ಆಗಮಿಸಿದ್ದಾರೆ.

ಅಂತಿಮ ದರ್ಶನ ಪಡೆಯಲು ಇಂದು ಬೆಳಿಗ್ಗೆಯಿಂದಲೇ ಅಭಿಮಾನಿಗಳು ಶ್ರೀದೇವಿಯವರ ನಿವಾಸದತ್ತ ಹರಿದು ಬರುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಬೋನಿ ಕಪೂರ್ ನಿವಾಸದಿಂದ ಕೂಗಳತೆ ದೂರದಲ್ಲಿರುವ ‘ದಿ ಸೆಲೆಬ್ರೇಷನ್ ಸ್ಪೋರ್ಟ್ಸ್ ಕ್ಲಬ್’ ನಲ್ಲಿ 9-30 ರಿಂದ 12-30 ರವರೆಗೆ ಸಾರ್ವಜನಿಕ ದರ್ಶನಕ್ಕಾಗಿ ಶ್ರೀದೇವಿಯವರ ಪಾರ್ಥಿವ ಶರೀರವನ್ನು ಇರಿಸಲಾಗುತ್ತಿದ್ದು, ಬಳಿಕ ಮೆರವಣಿಗೆಯಲ್ಲಿ ವಿಲೇಪಾರ್ಲೆಯಲ್ಲಿರುವ ಚಿತಾಗಾರಕ್ಕೆ ಕೊಂಡೊಯ್ದು ಅಂತ್ಯ ಸಂಸ್ಕಾರ ನೆರವೇರಿಸಲಾಗುತ್ತದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...