alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಚಾರಕ್ಕೆ ಬರ್ತೀನಿ ಎಂದು ಸಿ.ಎಂ.ಗೆ ಕೈ ಕೊಟ್ಟ ಸುದೀಪ್…?

ಮುಖ್ಯಮಂತ್ರಿ ಸಿದ್ಧರಾಮಯ್ಯ ಬಾದಾಮಿ ಮತ್ತು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದು, ಅವರ ಪರವಾಗಿ ನಟರಾದ ದರ್ಶನ್ ಮತ್ತು ಸುದೀಪ್ ಪ್ರಚಾರ ನಡೆಸಲಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಇಂದು ದರ್ಶನ್ ಸಿ.ಎಂ. ಪರವಾಗಿ ಪ್ರಚಾರ ನಡೆಸಲಿದ್ದಾರೆ. ನಂತರದಲ್ಲಿ ಸುದೀಪ್ ಚಾಮುಂಡೇಶ್ವರಿ ಮತ್ತು ಬಾದಾಮಿ ಕ್ಷೇತ್ರದಲ್ಲಿ ಪ್ರಚಾರಕ್ಕೆ ಬರಲಿದ್ದಾರೆ ಎನ್ನಲಾಗಿತ್ತು.

ಸುದೀಪ್ ಸಿ.ಎಂ. ಪರವಾಗಿ ಪ್ರಚಾರ ನಡೆಸುವುದಕ್ಕೆ ಸಂಸದ ಶ್ರೀರಾಮುಲು ವಿರೋಧ ವ್ಯಕ್ತಪಡಿಸಿದ್ದರು. ಅವರು ನಮ್ಮ ಸಮುದಾಯದವರಾಗಿ ನನ್ನ ಪರವಾಗಿ ಪ್ರಚಾರ ನಡೆಸಲಿ. ನಾನು ಸುದೀಪ್ ಅಭಿಮಾನಿಯಾಗಿದ್ದೇನೆ. ಸುದೀಪ್ ಬಗ್ಗೆ ಗೌರವವಿದೆ ಎಂದು ಹೇಳಿದ್ದರು. ಇನ್ನು ಬಾದಾಮಿ ಕ್ಷೇತ್ರದಲ್ಲಿ ಸುದೀಪ್ ಪ್ರಚಾರ ನಡೆಸಬಾರದೆಂದು ಅಭಿಮಾನಿಗಳು ಹಾಗೂ ಕೆಲ ಸಂಘಟನೆಗಳ ಕಾರ್ಯಕರ್ತರು ಹೇಳಿದ್ದರು.

ಇದೆಲ್ಲಾ ಬೆಳವಣಿಗೆಗಳ ಬಳಿಕ ಸುದೀಪ್ ಸಿ.ಎಂ. ಪರ ಪ್ರಚಾರ ನಡೆಸದಿರಲು ತೀರ್ಮಾನಿಸಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾತ್ರ ಸಿ.ಎಂ. ಪರವಾಗಿ ಪ್ರಚಾರ ಮಾಡಲಿರುವ ಅವರು ಬಾದಾಮಿ ಕ್ಷೇತ್ರದಲ್ಲಿ ಶ್ರೀರಾಮುಲು ಸ್ಪರ್ಧಿಸಿರುವುದರಿಂದ ಪ್ರಚಾರ ನಡೆಸುವುದಿಲ್ಲ ಎನ್ನಲಾಗಿದೆ.

ನಾನೊಬ್ಬ ಕಲಾವಿದ. ರಾಜಕಾರಣಕ್ಕೆ ಬರುವುದಿಲ್ಲ. ಎಲ್ಲಾ ಪಕ್ಷದಲ್ಲಿಯೂ ಸ್ನೇಹಿತರಿದ್ದಾರೆ. ಸಿ.ಎಂ. ಪರವಾಗಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತೇನೆ. ಬಾದಾಮಿಯಲ್ಲಿ ಪ್ರಚಾರ ಮಾಡಲ್ಲ ಎಂದು ಹೇಳಿದ್ದಾರೆನ್ನಲಾಗಿದೆ. ಇದರಿಂದಾಗಿ ಸುದೀಪ್ ಪ್ರಚಾರದಿಂದ ಸಮುದಾಯದ ಮತಗಳನ್ನು ಸೆಳೆಯಬೇಕೆಂದುಕೊಂಡಿದ್ದ ಸಿ.ಎಂ. ಮತ್ತು ಅವರ ಬೆಂಬಲಿಗರಿಗೆ ಹಿನ್ನಡೆಯಾಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...