alex Certify
ಕನ್ನಡ ದುನಿಯಾ       Mobile App
       

Kannada Duniya

ಫೇಸ್ ಬುಕ್ ಲೈವ್ ನಲ್ಲಿ ‘ದಿ ವಿಲನ್’ ರಹಸ್ಯ ಬಿಚ್ಚಿಟ್ಟ ಕಿಚ್ಚ

ಕಿಚ್ಚ ಸುದೀಪ್ 44 ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ಇದೇ ವೇಳೆ ‘ದಿ ವಿಲನ್’ ಚಿತ್ರತಂಡದಿಂದ ಮೋಷನ್ ಪೋಸ್ಟರ್ ರಿಲೀಸ್ ಮಾಡಲಾಗಿದೆ.

ಸುದೀಪ್ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದಿರಲು ಮೊದಲೇ ತೀರ್ಮಾನಿಸಿದ್ದು, ಅವರ ಅಭಿಮಾನಿಗಳು ಅನಾಥಾಶ್ರಮದ ಮಕ್ಕಳಿಗೆ ನೆರವು ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ರಾಜ್ಯದ ಅನೇಕ ಭಾಗದಲ್ಲಿ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ.

ಹೀಗೆ ಹುಟ್ಟುಹಬ್ಬದ ಆಚರಿಸಿದ ಕ್ಷಣಗಳನ್ನು ಹಂಚಿಕೊಂಡಿದ್ದು, ಅವರೆಲ್ಲರಿಗೂ ಸುದೀಪ್ ಕೃತಜ್ಞತೆ ಸಲ್ಲಿಸಿದ್ದಾರೆ. ಹೀಗಿದ್ದರೂ, ನೆಚ್ಚಿನ ನಟನಿಗೆ ಶುಭ ಕೋರಲು ರಾಜ್ಯದ ವಿವಿಧ ಕಡೆಗಳಿಂದ ಆಗಮಿಸಿದ್ದ ಅಭಿಮಾನಿಗಳು ತಮ್ಮೊಂದಿಗೆ ಬರ್ತಡೇ ಆಚರಿಸಿಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಫೇಸ್ ಬುಕ್ ಲೈವ್ ನಲ್ಲಿ ಕಾಣಿಸಿಕೊಂಡ ಕಿಚ್ಚ ‘ದಿ ವಿಲನ್’ ಚಿತ್ರದ ಮೋಷನ್ ಪೋಸ್ಟರ್, ‘ರಾಜು ಕನ್ನಡ ಮೀಡಿಯಂ’ ಚಿತ್ರದ ಟೀಸರ್ ರಿಲೀಸ್ ಮಾಡಿದ್ದಾರೆ.

ಇದೇ ಸಂದರ್ಭದಲ್ಲಿ ಅಭಿಮಾನಿಗಳೊಂದಿಗೆ ಮಾತನಾಡಿ, ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ. ‘ದಿ ವಿಲನ್’ ಚಿತ್ರದಲ್ಲಿ ನಾನು 3 ಲುಕ್ ನಲ್ಲಿ ಕಾಣಿಸಿಕೊಂಡಿದ್ದೇನೆ. ಒಂದನ್ನು ಮಾತ್ರ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ವಿಡಿಯೋ ಹಲ್ ಚಲ್ ಎಬ್ಬಿಸಿದೆ.

 

Motion Poster YouTube link – https://youtu.be/TWI7WeA2BPc

Nai-post ni TheVillain noong Biyernes, Setyembre 1, 2017

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...