alex Certify
ಕನ್ನಡ ದುನಿಯಾ       Mobile App
       

Kannada Duniya

ಕುತೂಹಲ ಮೂಡಿಸಿದೆ ದರ್ಶನ್, ಸುದೀಪ್ ರ ಮುಂದಿನ ಚಿತ್ರ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು ಥ್ರಿಲ್ ಆಗುವ ಮಾಹಿತಿಯೊಂದು ಇಲ್ಲಿದೆ.

‘ತಾರಕ್’ ಚಿತ್ರೀಕರಣ ಪೂರ್ಣಗೊಂಡಿದ್ದು, ಬಿಡುಗಡೆಗೆ ಸಿದ್ಧವಾಗುತ್ತಿದೆ. ‘ಕುರುಕ್ಷೇತ್ರ’ದಲ್ಲಿ ಬ್ಯುಸಿಯಾಗಿರುವ ದರ್ಶನ್ ಮುಂದಿನ ಚಿತ್ರದಲ್ಲಿ ಬಾಕ್ಸರ್ ಪಾತ್ರವನ್ನು ನಿರ್ವಹಿಸಲಿದ್ದಾರೆ. ಪವನ್ ಒಡೆಯರ್ ನಿರ್ದೇಶನದ ಹೊಸ ಚಿತ್ರದಲ್ಲಿ ದರ್ಶನ್ ಬಾಕ್ಸರ್ ಪಾತ್ರದಲ್ಲಿ ಮಿಂಚಲಿದ್ದಾರೆ.

ಇನ್ನು ಕಿಚ್ಚ ಸುದೀಪ್ ‘ದಿ ವಿಲನ್’ ಬಳಿಕ ‘ಹೆಬ್ಬುಲಿ’ ನಿರ್ದೇಶಕ ಕೃಷ್ಣ ನಿರ್ದೇಶನದ ಹೊಸ ಚಿತ್ರದಲ್ಲಿ ಬಾಕ್ಸರ್ ಆಗಿ ಮಿಂಚಲಿದ್ದಾರೆ.

ಸುದೀಪ್ ಹುಟ್ಟುಹಬ್ಬದ ದಿನ ಹೊಸ ಚಿತ್ರದ ಟೈಟಲ್ ಲಾಂಚ್ ಮಾಡಲಿದ್ದು, ‘ಪೈಲ್ವಾನ್’ ಎಂದು ಚಿತ್ರಕ್ಕೆ ಹೆಸರಿಡಲಾಗಿದೆ ಎನ್ನಲಾಗಿದೆ.

ಕಾಕತಾಳೀಯ ಎನ್ನುವಂತೆ ಸುದೀಪ್ ಮತ್ತು ದರ್ಶನ್ ತಮ್ಮ ಮುಂದಿನ ಚಿತ್ರಗಳಲ್ಲಿ ಬಾಕ್ಸರ್ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬಾಕ್ಸರ್ ಪಾತ್ರಕ್ಕೆ ಪೂರ್ವ ತಯಾರಿ ಮಾಡಿಕೊಳ್ಳಬೇಕಿದೆ. ಸದ್ಯ ಬ್ಯುಸಿಯಾಗಿರುವ ಚಿತ್ರಗಳನ್ನು ಪೂರ್ಣಗೊಳಿಸಿ ಬಾಕ್ಸರ್ ಪಾತ್ರಕ್ಕೆ ಸಿದ್ಧತೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...