alex Certify
ಕನ್ನಡ ದುನಿಯಾ       Mobile App
       

Kannada Duniya

ಮತ್ತೆ ಧೂಳೆಬ್ಬಿಸಿದ ಸುದೀಪ್, ದರ್ಶನ್

ಚಾಲೆಂಜಿಂಗ್ ಸ್ಟಾರ್ ದರ್ಶನ್, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಿನಿಮಾಗಳೆಂದರೆ ಅಭಿಮಾನಿಗಳಿಗೆ ಎಲ್ಲಿಲ್ಲದ ಸಂಭ್ರಮ.

ಇದೀಗ ಸುದೀಪ್ ಮತ್ತು ದರ್ಶನ್ ಮತ್ತೆ ಸ್ಯಾಂಡಲ್ ವುಡ್ ನಲ್ಲಿ ಧೂಳೆಬ್ಬಿಸಿದ್ದಾರೆ. ದರ್ಶನ್ ಅಭಿನಯದ ‘ತಾರಕ್’ ಟೀಸರ್ ಯು ಟ್ಯೂಬ್ ನಲ್ಲಿ ಸಂಚಲನ ಮೂಡಿಸಿದ್ದು, ಬಿಡುಗಡೆಯಾದ 4 ದಿನಗಳಲ್ಲೇ ಲಕ್ಷಾಂತರ ಮಂದಿ ವೀಕ್ಷಿಸಿದ್ದಾರೆ.

ಪ್ರಕಾಶ್ ನಿರ್ದೇಶನ, ದುಷ್ಯಂತ್ ನಿರ್ಮಾಣದಲ್ಲಿ ಮೂಡಿ ಬಂದಿರುವ ಈ ಚಿತ್ರದಲ್ಲಿ ದರ್ಶನ್ ಅವರೊಂದಿಗೆ ದೇವರಾಜ್, ಶಾನ್ವಿ ಶ್ರೀವಾಸ್ತವ್, ಶ್ರುತಿ ಹರಿಹರನ್ ಮೊದಲಾದವರು ನಟಿಸಿದ್ದಾರೆ.

ಅರ್ಜುನ್ ಜನ್ಯ ಸಂಗೀತ ನೀಡಿರುವ ‘ತಾರಕ್’ ದರ್ಶನ್ ಅಭಿನಯದ 49 ನೇ ಚಿತ್ರವಾಗಿದ್ದು, ಆರಂಭದಿಂದಲೂ ಭಾರೀ ಕುತೂಹಲ ಮೂಡಿಸಿದೆ. ಟೀಸರ್ ವೀಕ್ಷಿಸಿರುವ ಅಭಿಮಾನಿಗಳು ತಿಂಗಳಾಂತ್ಯಕ್ಕೆ ಸಿನಿಮಾ ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ.

ಇನ್ನು ಸುದೀಪ್ ಸ್ಟೈಲಿಶ್ ಲುಕ್ ನಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿರುವ ‘ರಾಜು ಕನ್ನಡ ಮೀಡಿಯಂ’ ಚಿತ್ರದ ಟೀಸರ್ ಕೂಡ ಹಲ್ ಚಲ್ ಎಬ್ಬಿಸಿದೆ.

ಸುದೀಪ್ ಹುಟ್ಟುಹಬ್ಬದ ಪ್ರಯುಕ್ತ ‘ರಾಜು ಕನ್ನಡ ಮೀಡಿಯಂ’ ಚಿತ್ರತಂಡದಿಂದ ಬಿಡುಗಡೆ ಮಾಡಲಾದ ಟೀಸರ್ ಅನ್ನು ಲಕ್ಷಾಂತರ ಮಂದಿ ವೀಕ್ಷಿಸಿದ್ದಾರೆ.

ದರ್ಶನ್ ‘ತಾರಕ್’ ಬಳಿಕ ‘ಕುರುಕ್ಷೇತ್ರ’ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಅದಾದ ಬಳಿಕ ಮುಂದಿನ ಚಿತ್ರದಲ್ಲಿ ಬಾಕ್ಸರ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸುದೀಪ್ ‘ದಿ ವಿಲನ್’ ಚಿತ್ರೀಕರಣ ಪೂರ್ಣಗೊಳಿಸಿ ಕೃಷ್ಣ ನಿರ್ದೇಶನದ ‘ಪೈಲ್ವಾನ್’ನಲ್ಲಿ ಬಾಕ್ಸರ್ ಹಾಗೂ ಕುಸ್ತಿಪಟು ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...