alex Certify
ಕನ್ನಡ ದುನಿಯಾ       Mobile App
       

Kannada Duniya

ತೆಲುಗು ಅಭಿಮಾನಿಗೆ ಮಿಡಿದ ಕಿಚ್ಚನ ಮನ

ಸ್ಯಾಂಡಲ್ ವುಡ್ ಬಹುಬೇಡಿಕೆ ನಟರಲ್ಲಿ ಒಬ್ಬರಾಗಿರುವ ಕಿಚ್ಚ ಸುದೀಪ್ ಅವರಿಗೆ ಬೇರೆ ಭಾಷೆಯಲ್ಲಿಯೂ ಅಪಾರ ಅಭಿಮಾನಿಗಳಿದ್ದಾರೆ. ತಮ್ಮ ಅಭಿನಯ ಮತ್ತು ಧ್ವನಿಯ ಮೂಲಕ ಕಿಚ್ಚ ತಾವು ಅಭಿನಯಿಸಿದ ಎಲ್ಲಾ ಭಾಷೆಗಳಲ್ಲಿಯೂ ಗಮನ ಸೆಳೆದಿದ್ದಾರೆ.

ಕನ್ನಡ, ಹಿಂದಿ, ತೆಲುಗು, ತಮಿಳು ಭಾಷೆಗಳಲ್ಲಿ ಅಭಿನಯಿಸಿರುವ ಸುದೀಪ್ ಹಾಲಿವುಡ್ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ತೆಲುಗಿನಲ್ಲಿ ಮೆಗಾಸ್ಟಾರ್ ಚಿರಂಜೀವಿ ಅಭಿನಯದ 151 ನೇ ಚಿತ್ರ ‘ಸೈರಾ ನರಸಿಂಹರೆಡ್ಡಿ’ ಚಿತ್ರದಲ್ಲಿ ನಿರ್ದೇಶಕರ ಒತ್ತಾಯದ ಮೇರೆಗೆ ಸುದೀಪ್ ಅಭಿನಯಿಸಲಿದ್ದಾರೆ. ಅದಕ್ಕಿಂತ ಹಿಂದೆಯೇ ಎಸ್.ಎಸ್. ರಾಜಮೌಳಿ, ಆರ್.ಜಿ.ವಿ. ಮೊದಲಾದ ಖ್ಯಾತ ನಿರ್ದೇಶಕರ ಚಿತ್ರದಲ್ಲಿ ಅವರು ಕಾಣಿಸಿಕೊಂಡಿದ್ದು, ಅಲ್ಲಿಯೂ ಅವರಿಗೆ ಅಪಾರ ಅಭಿಮಾನಿಗಳಿದ್ದಾರೆ.

ತೆಲುಗಿನ ಅಭಿಮಾನಿಯೊಬ್ಬರು ತೆಲುಗು ಚಿತ್ರದಲ್ಲಿ ನಟಿಸುವಂತೆ ಕೋರಿದ್ದು, ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸುದೀಪ್, ಒಳ್ಳೆಯ ಸ್ಕ್ರಿಪ್ಟ್ ಸಿಕ್ಕರೆ ಖಂಡಿತಾ ಅಭಿನಯಿಸುತ್ತೇನೆ ಫ್ರೆಂಡ್ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುತ್ತಾ ಬಿಜೆಪಿ...?

    View Results

    Loading ... Loading ...