alex Certify
ಕನ್ನಡ ದುನಿಯಾ       Mobile App
       

Kannada Duniya

ಸ್ಯಾಂಡಲ್ವುಡ್ ಚಿತ್ರ ತಾರೆಯರ ಕ್ರಿಕೆಟ್ ಜಾತ್ರೆಗೆ ಕ್ಷಣಗಣನೆ

ಸ್ಯಾಂಡಲ್ವುಡ್ ನ ಅಭಿನಯ ಚಕ್ರವರ್ತಿ ನಟ ಸುದೀಪ್ ಮುಂದಾಳತ್ವದಲ್ಲಿ ಕರ್ನಾಟಕ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಗೆ ಚಾಲನೆ ನೀಡಿರೋ ವಿಚಾರ ನಿಮಗೆಲ್ಲಾ ಗೊತ್ತೇ ಇದೆ ಅಲ್ವಾ. ಈಗ ಸ್ಯಾಂಡಲ್ವುಡ್ ಸೆಲೆಬ್ರಿಟಿ ಲೀಗ್ ನಲ್ಲಿ ಭಾಗವಹಿಸಲು ಸೆಲೆಬ್ರಿಟಿ ಕ್ರಿಕೆಟ್ ಲೀಗ್ ನ ಎಲ್ಲಾ ತಂಡಗಳು ಭರ್ಜರಿ ತಯಾರಿ ನಡೆಸುತ್ತಿವೆ. ಅದರಲ್ಲೂ ಕಿಚ್ಚ ಸುದೀಪ್ ಈ ಟೂರ್ನಿಯ ಬಗ್ಗೆ ಸಾಕಷ್ಟು ಕ್ಯೂರಿಯಾಸಿಟಿ ಹೊಂದಿದ್ದಾರಂತೆ.

ಸೆಪ್ಟೆಂಬರ್ 8 ಮತ್ತು 9ರಂದು ನಡೆಯಲಿರುವ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ನ ಜಾತ್ರೆಗೆ ಈಗಾಗ್ಲೇ ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ನ ಸ್ಟೇಡಿಯಂ ಅಂದ್ರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಂತಿಮ ಹಂತದ ಸಿದ್ಧತೆಗಳು ನಡೀತಿವೆ. ಸ್ಯಾಂಡಲ್ವುಡ್ ನ ಅನೇಕ ನಾಯಕರು ಲೀಡ್ ಮಾಡಲಿರೋ ತಂಡಗಳಲ್ಲಿ ಅಂತಾರಾಷ್ಟ್ರೀಯ ಆಟಗಾರರು ಕೂಡ ಪಾಲ್ಗೊಳ್ಳುತ್ತಿರುವುದರಿಂದ ಟೂರ್ನಿಮೆಂಟ್ ನ ಖ್ಯಾತಿ ಹೆಚ್ಚಾಗಲಿದೆ.

ಈ ಕ್ರಿಕೆಟ್ ಟೂರ್ನಿಗೆ ಕ್ರಿಕೆಟ್ ಪ್ರೇಮಿಗಳ ಬೆಂಬಲದ ಜೊತೆಗೆ ತಮಿಳು, ತೆಲುಗು, ಹಿಂದಿ, ಮತ್ತು ಮಲಯಾಳಂ ಸಿನಿಮಾ ರಂಗದ ಗಣ್ಯರು ಕೂಡ ಹಾಜರಿ ಹಾಕಲಿದ್ದಾರೆ ಅಂತ ಹೇಳಲಾಗ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...