alex Certify
ಕನ್ನಡ ದುನಿಯಾ       Mobile App
       

Kannada Duniya

ಸುದೀಪ್ ಅಭಿನಯದ ‘ಹೆಬ್ಬುಲಿ’ ಬಿಡುಗಡೆಗೆ ಮುಹೂರ್ತ ಫಿಕ್ಸ್

800x480_IMAGE54202849

ಬಹುಭಾಷಾ ನಟ ಕಿಚ್ಚ ಸುದೀಪ್ ಅಭಿಮಾನಿಗಳಿಗೊಂದು ಖುಷಿ ಸುದ್ದಿ. ಅಭಿನಯ ಚಕ್ರವರ್ತಿ ಸುದೀಪ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಹೆಬ್ಬುಲಿ’ ಬಿಡುಗಡೆ ದಿನಾಂಕ ಹೊರಬಿದ್ದಿದೆ. ಇದೇ ವರ್ಷ ಚಿತ್ರ ತೆರೆಗೆ ಬರಲಿದ್ದು, ಅಭಿಮಾನಿಗಳು ಒಂದೇ ವರ್ಷ ಕಿಚ್ಚನ ಮೂರು ಚಿತ್ರಗಳನ್ನು ಎಂಜಾಯ್ ಮಾಡಬಹುದಾಗಿದೆ.

‘ಹೆಬ್ಬುಲಿ’ ಚಿತ್ರ ಜೂನ್ ನಲ್ಲಿ ಚಿತ್ರೀಕರಣ ಶುರುಮಾಡಿತ್ತು. ಈಗಾಗಲೇ ಶೇಕಡಾ 80ರಷ್ಟು ಚಿತ್ರೀಕರಣ ಪೂರ್ಣಗೊಂಡಿದೆ. ನಾಲ್ಕು ಹಾಡುಗಳು ಮಾತ್ರ ಬಾಕಿ ಉಳಿದಿದ್ದು, ನವೆಂಬರ್ ಒಂದರಂದು ಚಿತ್ರದ ಆಡಿಯೋ ರಿಲೀಸ್ ಆಗಲಿದೆಯಂತೆ. ನಂತ್ರ ಕ್ರಿಸ್ ಮಸ್ ಗೆ ಚಿತ್ರ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಹೇಳಿದೆ.

ಸಿನಿಮಾದಲ್ಲಿ ಆರ್ಮಿ ಆಫೀಸರಾಗಿ ಸುದೀಪ್ ಕಾಣಿಸಿಕೊಳ್ಳಲಿದ್ದಾರೆ. ಛಾಯಾಗ್ರಾಹಕ ಕೃಷ್ಣ ನಿರ್ದೇಶನದ ‘ಹೆಬ್ಬುಲಿ’ ಚಿತ್ರದ ಟೀಸರ್ ಈ ಹಿಂದೆಯೇ ರಿಲೀಸ್ ಆಗಿದ್ದು, ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಕೆರಳಿಸಿದೆ. ಈ ವರ್ಷ ಸುದೀಪ್ ಅಭಿಮಾನಿಗಳಿಗೆ ಬಂಪರ್ ಕೊಡುಗೆ ಸಿಕ್ಕಿದೆ. ಒಂದೇ ವರ್ಷ ಸುದೀಪ್ ಅಭಿನಯದ ಮೂರು ಚಿತ್ರಗಳನ್ನು ನೋಡುವ ಅವಕಾಶ ಸಿಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...