alex Certify
ಕನ್ನಡ ದುನಿಯಾ       Mobile App
       

Kannada Duniya

ಲಾರ್ಡ್ ನಲ್ಲಿ ಫೈನಲ್ ಮ್ಯಾಚ್ ನೋಡಲಿದ್ದಾರೆ ಸುದೀಪ್

sudep-lords

ಅಭಿನಯ ಮಾತ್ರವಲ್ಲ, ಚಿತ್ರ ನಿರ್ದೇಶನ, ನಿರ್ಮಾಣದಲ್ಲಿಯೂ ಸುದೀಪ್ ತೊಡಗಿಕೊಂಡಿದ್ದಾರೆ. ಅಲ್ಲದೇ, ಕ್ರಿಕೆಟ್ ನಲ್ಲಿಯೂ ಮಿಂಚಿದ್ದಾರೆ.

ಸಿ.ಸಿ.ಎಲ್.ನಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡದ ನಾಯಕರಾಗಿರುವ ಸುದೀಪ್ ಕೆಲವು ತಿಂಗಳ ಹಿಂದೆ ಲಂಡನ್ ನ ಲಾರ್ಡ್ಸ್ ಮೈದಾನದಲ್ಲಿ ಕ್ರಿಕೆಟ್ ಆಡಿದ್ದರು.

ಸದ್ಯ ‘ದಿ ವಿಲನ್’ ಚಿತ್ರದ ಶೂಟಿಂಗ್ ಗಾಗಿ ಲಂಡನ್ ನಲ್ಲಿರುವ ಅವರು ಭಾನುವಾರ ಐ.ಸಿ.ಸಿ. ಮಹಿಳಾ ವಿಶ್ವಕಪ್ ಫೈನಲ್ ಪಂದ್ಯವನ್ನು ವೀಕ್ಷಿಸಲಿದ್ದಾರೆ.

ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿರುವ ಪಂದ್ಯವನ್ನು ಕಣ್ತುಂಬಿಕೊಳ್ಳಲಿದ್ದಾರೆ. ಟ್ವಿಟರ್ ನಲ್ಲಿ ಈ ಮಾಹಿತಿ ಹಂಚಿಕೊಂಡಿರುವ ಸುದೀಪ್, ಲಾರ್ಡ್ಸ್ ನಲ್ಲಿ ನಡೆಯಲಿರುವ ಮಹಿಳಾ ವಿಶ್ವಕಪ್ ಫೈನಲ್ ನ ಕ್ಷಣಗಳನ್ನು ಮಿಸ್ ಮಾಡಿಕೊಳ್ಳಲಾಗದು ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...