alex Certify
ಕನ್ನಡ ದುನಿಯಾ       Mobile App
       

Kannada Duniya

ಅಭಿಮಾನಿಗಳ ಆಸೆ ಈಡೇರಿಸಿದ ಅಭಿನಯ ಚಕ್ರವರ್ತಿ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಅಭಿಮಾನಿಗಳ ಸಂಖ್ಯೆ ಜಾಸ್ತಿ. ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳೊಂದಿಗೆ ಅವರು ನಿರಂತರ ಸಂಪರ್ಕದಲ್ಲಿರುತ್ತಾರೆ. ಸುದೀಪ್ ಅವರ ಹುಟ್ಟುಹಬ್ಬಕ್ಕೆ ಶುಭ ಕೋರಬೇಕೆಂದುಕೊಂಡಿದ್ದ ಅಭಿಮಾನಿಗಳಿಗೆ ಈ ಬಾರಿ ನಿರಾಸೆಯಾಗಿತ್ತು.

ಸುದೀಪ್ ಹುಟ್ಟುಹಬ್ಬದ ಆಚರಣೆಯಿಂದ ದೂರ ಉಳಿದು, ಸಾಮಾಜಿಕ ಕಾರ್ಯಗಳನ್ನು ಕೈಗೊಳ್ಳುವಂತೆ ತಿಳಿಸಿದ್ದರು. ಅದರಂತೆ ಅವರ ಅಭಿಮಾನಿಗಳು ವಿವಿಧ ಸೇವಾಕಾರ್ಯಗಳ ಮೂಲಕ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಆಚರಿಸಿದ್ದರು.

ಹುಟ್ಟುಹಬ್ಬದ ಹೊರತಾಗಿ ಅವರನ್ನು ಭೇಟಿ ಮಾಡಲು ಕಾತರರಾಗಿದ್ದ ಅಭಿಮಾನಿಗಳಿಗೆ ಅಖಿಲ ಕರ್ನಾಟಕ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸೇನಾ ಸಮಿತಿ ಸುದೀಪ್ ಭೇಟಿ ಕಾರ್ಯಕ್ರಮ ಆಯೋಜಿಸಲಾಗಿದೆ. ಚಿತ್ರರಂಗದಲ್ಲಿ 22 ವರ್ಷ ಪೂರ್ಣಗೊಳಿಸಿದ ಸುದೀಪ್ ಅವರನ್ನು ಕಾರ್ಯಕ್ರಮದಲ್ಲಿ ಅಭಿನಂದಿಸಲಾಗಿದೆ. ಅಭಿಮಾನಿಗಳ ಭೇಟಿ ಕಾರ್ಯಕ್ರಮದಲ್ಲಿ ಅಪಾರ ಅಭಿಮಾನಿಗಳು ಭಾಗವಹಿಸಿ ಸುದೀಪ್ ಅವರೊಂದಿಗೆ ಫೋಟೋ, ಸೆಲ್ಫಿ ತೆಗೆಸಿಕೊಂಡು, ಸಂಭ್ರಮಿಸಿದ್ದಾರೆ. ನೆಚ್ಚಿನ ನಟನಿಗೆ ಶುಭಾಶಯ ಹೇಳಿದ್ದಾರೆ. ಅಭಿಮಾನಿಗಳ ಜೊತೆ ಸಮಯ ಕಳೆದ ಕಿಚ್ಚ ಕೂಡ ಖುಷಿಯಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...